Header Ads
Breaking News

ಮಂಗಳೂರಿನ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ: ಇಬ್ಬರಿಗೆ ಗಾಯ

ಮಂಗಳೂರಿನ ಕೊಡಿಯಾಲ್ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ.

ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ ವಿಚಾರಣಾಧೀನ ಕೈದಿಗಳಿಗೆ ಹಲ್ಲೆ ನಡೆಸಿದ್ದಾನೆ. ಮುಲ್ಕಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಅನ್ಸಾರ್ ಮೇಲೆ ಹಲ್ಲೆ ನಡೆಸಿದ್ದಾನೆ.

ಸ್ಟೀಲ್ ಚಮಚ ಮತ್ತಿತರ ಅಡುಗೆ ಪರಿಕರಗಳನ್ನು ಬಳಸಿ, ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಅನ್ಸಾರ್ ಮತ್ತು ಮೂಡುಬಿದ್ರೆಯ ದರೋಡೆ ಪ್ರಕರಣದ ಜೈನುದ್ದೀನ್ ಎಂಬಾತ ಕೂಡ ಗಾಯಗೊಂಡಿದ್ದಾನೆ.
ಬೆಳಗ್ಗಿನ ಉಪಾಹಾರದ ಸಮಯದಲ್ಲಿ ಮಾರಾಮಾರಿ ನಡೆದಿದೆ ಎನ್ನಲಾಗಿದ್ದು, ಜೈಲಿಗೆ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *