Header Ads
Breaking News

ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಶಾಸಕ ಖಾದರ್ ಭೇಟಿ

ಮುಂದಿನ ದಿನಗಳಲ್ಲಿ ಕೋವಿಡ್‍ನ ಪರಿಸ್ಥಿತಿಯನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ. ಅದಕ್ಕಾಗಿ ಮುಂಜಾಗ್ರತೆ ವಹಿಸಬೇಕಾಗಿರುವುದು ನಮ್ಮ ಕರ್ತವ್ಯ. ಕೋವಿಡ್‍ಗೆ ಸಂಬಂಧಿಸಿದಂತೆ ವೆನ್ಲಾಕ್ ಆಸ್ಪತ್ರೆಗೆ ಬೇಕಾದ ವೆಂಟಿಲೇಟರ್, ಆಕ್ಸಿಜನ್ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಮಾಜಿ ಸಚಿವ ಶಾಸಕ ಯು.ಟಿ. ಖಾದರ್ ಹೇಳಿದರು.ut kadhar

ಅವರು ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಶಾಸಕ ಖಾದರ್ ನೇತೃತ್ವದ ಕಾಂಗ್ರೆಸ್ ನಿಯೋಗವು ಭೇಟಿ ನೀಡಿ ಆಸ್ಪತ್ರೆಯ ಸದ್ಯದ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿ, ಬಳಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ಅಗತ್ಯವಾಗಿ ಬೇಕಾಗಿದೆ. ಇನ್ನು ಆಸ್ಪತ್ರೆಗೆ ಅಗತ್ಯವಾಗಿ ಬೇಕಾಗಿರುವ ಆಕ್ಸಿಜನ್ ಎಲ್ಲಿಂದ ಮತ್ತು ಎಷ್ಟೇಷ್ಟು ಸಪ್ಲೈ ಆಗುತ್ತಿದೆ ಎಂಬುವುದರ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟವಾದ ಮಾಹಿತಿ ನೀಡಬೇಕು ಎಂದು ಹೇಳಿದರು.

ಈ ಸಂದರ್ಭ ಮಾಜಿ ಶಾಸಕ ಜೆ.ಆರ್ ಲೋಬೊ, ಮಾಜಿ ಎಮ್‍ಎಲ್‍ಸಿ ಐವನ್ ಡಿಸೋಜ, ಯುವ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ಮಿಥುನ್ ರೈ, ಎ.ಸಿ. ವಿನಯರಾಜ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಜೊತೆಗಿದ್ದರು.

Related posts

Leave a Reply

Your email address will not be published. Required fields are marked *