Header Ads
Breaking News

ಮಂಗಳೂರು : ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಊಟದ ವ್ಯವಸ್ಥೆ

ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕೊರೋನ ವಾರಿಯರ್ಸ್‍ಗಳಾಗಿ ಮುಂಚೂಣಿಯಲ್ಲಿ ಸೇವೆ ಸಲ್ಲಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ಕಚೇರಿ ಆವರಣದಲ್ಲಿ ಇಂದು ಚಾಲನೆ ನೀಡಲಾಯಿತು.ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ನೇತೃತ್ವದಲ್ಲಿ ಈ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ವಿವಿಧ ವಿಭಾಗಗಳಲ್ಲಿ ಪಾಳಿಗಳಲ್ಲಿ ರಾತ್ರಿ ಹಗಲೆನ್ನದೆ ಸೇವೆ ಸಲ್ಲಿಸುವ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಸಿಬ್ಬಂದಿಗೆ ಅನುಕೂಲವಾಗುವಂತೆ ಈ ಮಧ್ಯಾಹ್ನದ ಉಚಿತ ಊಟದ ವ್ಯವಸ್ಥೆಯನ್ನು ಆರಂಭಿಸಲಾಗಿದೆ.ಪ್ರತಿನಿತ್ಯ ಕನಿಷ್ಠ 250ರಿಂದ 300 ಸಿಬ್ಬಂದಿಗೆ ಊಟದ ವ್ಯವಸ್ಥೆಯನ್ನು ಮಾಡಲು ಸದ್ಯ ನಿರ್ಧರಿಸಲಾಗಿದ್ದು, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಉತ್ತರ ಕರ್ನಾಟಕದ 1000ಕ್ಕೂ ಅಧಿಕ ಮಂದಿ ಸೇರಿ ಸಿಬ್ಬಂದಿ ಸೇರಿದಂತೆ 2000ದಷ್ಟು ಸಿಬ್ಬಂದಿ ಸೇವೆಯಲ್ಲಿದ್ದಾರೆ.

ಇದೇ ವೇಳೆ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, “ಇಲಾಖೆಯಲ್ಲಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಲ್ಲಿ ಬಹಳಷ್ಟು ಯುವಕರು, ಅವಿವಾಹಿತರು ಇದ್ದು, ಕೆಲವರು ತಮ್ಮ ಪೊಷಕರ ಜತೆ ಇಲ್ಲೇ ವಾಸವಾಗಿದ್ದರು. ಆದರೆ ಕೋವಿಡ್ ಕಾರಣದಿಂದ ಹಲವರು ತಮ್ಮ ಕುಟುಂಬಸ್ಥರನ್ನು ಈಗಾಗಲೇ ಊರುಗಳಿಗೆ ಕಳುಹಿಸಿದ್ದಾರೆ. ಸದ್ಯ ಹೊಟೇಲ್, ರೆಸ್ಟೋರೆಂಟ್‍ಗಳಲ್ಲಿ ಊಟ ಮಾಡುವ ವ್ಯವಸ್ಥೆ ಇಲ್ಲ. ಹಾಗಾಗಿ ಸಿಬ್ಬಂದಿಗೆ ಬಹಳಷ್ಟು ತೊಂದರೆಯಾಗುವುದು ಗಮನಕ್ಕೆ ಬಂದ ಕಾರಣ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.ಈ ಸಂದರ್ಭ ಡಿಸಿಪಿಗಳಾದ ಹರಿರಾಂ ಶಂಕರ್, ವಿನಯ್ ಗಾಂವ್ಕರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *