Header Ads
Breaking News

ಡಾ. ಪದ್ಮನಾಭ ಕಾಮತ್ ಅವರಿಗೆ ರೋಟರಿ ವಂದನಾ ಪ್ರಶಸ್ತಿ ಪ್ರದಾನ

ಮಂಗಳೂರು: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್‍ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪ್ರಾಯೋಜಿಸುತ್ತಿರುವ ರಾಜ್ಯಮಟ್ಟದ ವಾರ್ಷಿಕ ಪ್ರತಿಷ್ಠಿತ ’ವಂದನಾ ಪ್ರಶಸ್ತಿಗೆ ಖ್ಯಾತ ವೈದ್ಯರಾದ ಡಾ. ಪದ್ಮನಾಭ ಕಾಮತ್ ಅವರು ಆಯ್ಕೆಯಾಗಿದ್ದು ಅವರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ವಿ4ನ್ಯೂಸ್ ಸ್ಟುಡಿಯೋದಲ್ಲಿ ನಡೆಯಿತು.

ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್‍ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ವತಿಯಿಂದ ಕಳೆದ 17 ವರ್ಷಗಳಿಂದ ರಾಜ್ಯಮಟ್ಟದ ವಾರ್ಷಿಕ ಪ್ರತಿಷ್ಠಿತ ವಂದನಾ ಪ್ರಶಸ್ತಿ ಪ್ರದಾನ ಮಾಡುತ್ತಿದ್ದು, ಈ ಬಾರಿ ಖ್ಯಾತ ವೈದ್ಯರಾದ ಡಾ. ಪದ್ಮನಾಭ ಕಾಮತ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಂಗಳೂರಿನ ಯೆಯ್ಯಾಡಿಯಲ್ಲಿರುವ ವಿ೪ ನ್ಯೂಸ್ ಸ್ಟುಡಿಯೋದಲ್ಲಿ ನಡೆದ ನೇರಪ್ರಸಾರದ ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯರಾದ ಡಾ. ಪದ್ಮನಾಭ ಕಾಮತ್ ಅವರಿಗೆ ಪ್ರಶಸ್ತಿ ಫಲಕ, ಪ್ರಶಸ್ತಿ ಪ್ರಮಾಣ ಪತ್ರ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.


ಇದೇ ಸಂದರ್ಭದಲ್ಲಿ ಮಾತನಾಡಿದ ವಂದನಾ ಪ್ರಶಸ್ತಿ ಆಯ್ಕೆ ಸಮಿತಿಯ ಸಭಾಪತಿ ರೋಟೇರಿಯನ್ ಡಾ. ದೇವದಾಸ್ ರೈ ಅವರು, ಪ್ರಸ್ತುತ 2021ನೇ ಸಾಲಿನ ಪ್ರಶಸ್ತಿಗೆ ನಗರದ ಖ್ಯಾತ ವೈದ್ಯರಾದ ಡಾ. ಪದ್ಮನಾಭ ಕಾಮತ್ ಅವರನ್ನು ಆಯ್ಕೆ ಮಾಡಲಾಗಿದೆ. ಅವರು, ಜಿಲ್ಲೆಯ ವೈದ್ಯಕೀಯ ಕ್ಷೇತ್ರದಲ್ಲಿ ಸಾಧಿಸಿದ ಗಣನೀಯ ಸಾಧನೆಯನ್ನು ಮತ್ತು ನೀಡಿದ ಅಮೂಲ್ಯ ಕೊಡುಗೆ ಮತ್ತು ಸುದೀರ್ಘ ಅನುಪಮ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿದ ಮಾತನಾಡಿದ ಡಾ. ಪದ್ಮನಾಭ ಕಾಮತ್ ಅವರು ಮಾತನಾಡಿ, ಆರೋಗ್ಯ ಸೇವೆಯಲ್ಲಿ ಅವಿರತ ಸೇವೆಯನ್ನು ಗುರುತಿಸಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್‍ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯು ಪ್ರಶಸ್ತಿ ನೀಡಿ ಗೌರವಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.


ಆನಂತರ ಮಾತನಾಡಿದ ರೋಟರಿ ಅಂತರರಾಷ್ಟ್ರೀಯ ಜಿಲ್ಲಾ 3181 ಗವರ್ನರ್ ಮೇಜರ್ ಡೋನರ್ ರೋಟರಿಯನ್ ಎಂ. ರಂಗನಾಥ್ ಭಟ್, ರೋಟರಿ ಕ್ಲಬ್‌ಗಳು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಕಡು ಬಡವರಿಗೆ ಸಹಾಯಹಸ್ತವನ್ನು ಚಾಚುತ್ತಾ ಬಂದಿದೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷರಾದ ರೋಟರಿಯನ್ ಪ್ರಕಾಶ್ಚಂದ್ರ ಅವರು ಮಾತನಾಡಿ, 3181 ನಾಲ್ಕು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವಂತಹ ಜಿಲ್ಲೆ. ನಾಲ್ಕು ಜಿಲ್ಲೆಗಳಲ್ಲಿ ೮೪ ರೋಟರಿ ಕ್ಲಬ್‌ಗಳಿವೆ 3354  ಸದಸ್ಯರಿದ್ದಾರೆ ಎಂದು ಅವರು ಎಲ್ಲರೂ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ ಎಂದರು.


ಇದೇ ವೇಳೆ ಸಮಾರಂಭದಲ್ಲಿ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್‌ನ ಸೆಂಟ್ರೋ ಅನ್ನು ಗಣ್ಯರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ರೋಟರ್‍ಯಾಕ್ಟ್ ಕ್ಲಬ್ ಮಂಗಳೂರು ಸಿಟಿಯ ಅಧ್ಯಕ್ಷ ರೋಟರ್‍ಯಾಕ್ಟ್ ಡೆರಿಲ್ ಸ್ವೀವನ್ ಡಿಸೋಜಾ ಉಪಸ್ಥಿತರಿದ್ದರು.ಇನ್ನು ರೋಟರಿ ವಂದನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ವಿ೪ ನ್ಯೂಸ್ ಕರ್ನಾಟಕ ಚಾನೆಲ್, ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಲ್ಲಿ ಯಶಸ್ವಿಯಾಗಿ ನೇರಪ್ರಸಾರಗೊಂಡಿತು.

 

Related posts

Leave a Reply

Your email address will not be published. Required fields are marked *