Header Ads
Breaking News

ಮಠಂತಬೆಟ್ಟುವಿನ ಶ್ರೀ ಮಹಿಷಮರ್ಧಿನಿ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮುಂದೂಡಿಕೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟುವಿನಲ್ಲಿರುವ ಶ್ರೀ ಮಹಿಷಮರ್ಧಿನಿ ದೇವಾಲಯದ ಬ್ರಹ್ಮಕಲಶೋತ್ಸವವನ್ನು ಭಕ್ತರ ಮತ್ತು ಗ್ರಾಮದ ಹಿರಿಯರ ಸಲಹೆ ಪಡೆದು ಕೊರೋನಾ ಮುನ್ನೆಚರಿಕೆ ಹಾಗೂ ಸರಕಾರದ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸುವ ನಿಟ್ಟಿನಲ್ಲಿ ಏ. 24ರಿಂದ 30ರವರೆಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಶ್ರೀ ದೇವಿಯ ಅಷ್ಟಬಂಧ ಬ್ರಹ್ಮಕಲಶೋತ್ಸವವನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ ಎಂದು ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಉದ್ಯಮಿ ಕೆ.ಎಸ್. ಅಶೋಕ್ ರೈ ಕೋಡಿಂಬಾಡಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಹ್ಮಕಲಶೋತ್ಸವ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಲಾಗಿತ್ತು. ಕಳೆದ ವರ್ಷವೂ ಕೊರೋನಾ ಕಾರಣದಿಂದಾಗಿ ಬ್ರಹ್ಮಕಲಶೋತ್ಸವ ಮುಂದೂಡಲ್ಪಟ್ಟಿತ್ತು. ಈ ವರ್ಷ ಬ್ರಹ್ಮಕಲಶೋತ್ಸವವನ್ನು ನೆರವೇರಿಸುವ ಅಭಿಲಾಷೆ  ಸಮಸ್ತ ಭಕ್ತರಿಗಿತ್ತು. ಆದರೆ ಮತ್ತೆ ಕೊರೋನಾ ಆತಂಕ ಎದುರಾದ ಕಾರಣ ಬ್ರಹ್ಮಕಲಶೋತ್ಸವವನ್ನು ಮುಂದೂಡಲಾಗಿದೆ. ಕಾನೂನನ್ನು ಗೌರವಿಸುವ ಕೆಲಸ ಮಾಡಲಾಗಿದೆ. ಸಮಾಜದ ಆರೋಗ್ಯದ ದೃಷ್ಠಿಯ ಕುರಿತು ಗಮನಹರಿಸಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಾನಂದ ಕೆ., ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೋಶಾಧಿಕಾರಿ ನಿರಂಜನ್ ರೈ ಮಠಂತಬೆಟ್ಟು, ಮಾದ್ಯಮ ಸಮಿತಿಯ ಸಂಚಾಲಕ ಜಯಪ್ರಕಾಶ್ ಬದಿನಾರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *