Header Ads
Breaking News

ಮಧಬಾವಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್

ದೇಶಾದ್ಯಂತ ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಇವತ್ತು ಮದಭಾವಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮದಭಾವಿ ಹಾಗೂ ಅನಂತಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಕೋವಿಡ್ ಸೊಂಕಿತರಿಗೆ ಅನುಕೂಲವಾಗಲೆಂದು 30 ಬೆಡ್‍ಗಳ ಕೋವಿಡ್ ಸೆಂಟರ್ ಪ್ರಾರಂಭಿಸಲಾಗಿದೆ.

ಶಾಸಕರು ಹಾಗೂ ರಾಜ್ಯ ಸರ್ಕಾರ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮಂತ ಪಾಟೀಲ ರವರು ಚಾಲನೆ ನೀಡಿದರು. ತಾಲೂಕು,ಆಡಳಿತದ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೋವಿಡ್ ಸೆಂಟರ್‍ಗಳಲ್ಲಿ ಸೊಂಕಿತರಿಗೆ ಉತ್ತಮ ರೀತಿಯಲ್ಲಿ ಸ್ಪಂದನೆ ನೀಡಬೇಕು ಎಂದು ಹೇಳಿದರು.

ಅಥಣಿ ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ, ನಮ್ಮ ಮದಭಾವಿ ಹಾಗೂ ಅನಂತಪುರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳು ಅಥಣಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವುದರಿಂದ ಇಲ್ಲಿನ ಸೊಂಕಿತರು ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಥಣಿ ತಹಸೀಲ್ದಾರ ದುಂಡಪ್ಪಾ ಕೋಮಾರ, ಡಿವಾಯ್ ಎಸ್.ಪಿ ಎಸ್. ವ್ಹಿ ಗಿರೀಶ, ಅಥಣಿ ಸಿಪಿಐ ಶಂಕರಗೌಡ ಬಸನಗೌಡರ, ಅಥಣಿ ಪಿಎಸ್‍ಐ ಕುಮಾರ ಹಾಡಕರ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರವೀಣ ಪಾಟೀಲ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *