Header Ads
Breaking News

ಮನಪಾ ವೆಚ್ಚದಲ್ಲಿ ಕೋವಿಡ್‍ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರದ ವೆಚ್ಚವನ್ನು ಮಂಗಳೂರು ಮಹಾನಗರ ಪಾಲಿಕೆ ಭರಿಸಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸಂಸದರ ವಾರ್ ರೂಂನಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2 ವಿದ್ಯುತ್ ಚಿತಾಗಾರಗಳಿವೆ. ಅದರಲ್ಲಿ ತಾಂತ್ರಿಕ ಕಾರಣಗಳಿಂದ ಬೋಳೂರಿನ ಚಿತಾಗಾರ ಕಾರ್ಯ ನಿರ್ವಹಿಸದಿರುವ ಕಾರಣ ಕಟ್ಟಿಗೆಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯುತ್ತಿದೆ. ಇದಕ್ಕೆ 8 ಸಾವಿರ ರು. ದರವಿದ್ದುದನ್ನು 5,500 ರು.ಗೆ ಇಳಿಕೆ ಮಾಡಲಾಗಿದೆ. ಆದರೆ ಕೋವಿಡ್ ಸಾವಿನ ಸನ್ನಿವೇಶಗಳಲ್ಲಿ ದುಪ್ಪಟ್ಟು ಹಣ ಕೇಳುತ್ತಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರದ ವೆಚ್ಚವನ್ನು ಮಹಾನಗರ ಪಾಲಿಕೆಯೇ ಭರಿಸುವಂತೆ ಮೇಯರ್ ಹಾಗೂ ಆಯುಕ್ತರ ಜೊತೆ ಮಾತುಕತೆ ನಡೆಸಿ ಸೂಚನೆ ನೀಡಲಾಗಿದೆ ಎಂದ್ರು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷರಾದ ನಿತಿನ್ ಕುಮಾರ್, ಮೈಸೂರು ಎಲೆಕ್ಟ್ರಿಕಲ್ ಲಿಮಿಟೆಡ್ ಅದ್ಯಕ್ಷರಾದ ಸಂತೋμï ರೈ ಬೋಳಿಯಾರು, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಜೀ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *