Header Ads
Breaking News

ಮುನ್ನೂರು : ಆಶಾ ಕಾರ್ಯಕರ್ತೆಯರಿಗೆ ಆಕ್ಸಿಮೀಟರ್ -ಥರ್ಮಲ್ ಸ್ಕ್ಯಾನರ್ ವಿತರಣೆ

ಉಳ್ಳಾಲ: ಶಾಸಕರ ಸಭೆಯಲ್ಲಿ ನಿರ್ಣಯಿಸಿದಂತೆ ಕೊರೊನಾ ಸಂದರ್ಭ ತಳಮಟ್ಟದಲ್ಲಿ ಕಾರ್ಯಾಚರಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಆಕ್ಸಿಮೀಟರ್, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆಯ ಜೊತೆಗೆ ಊರಿನ ವ್ಯಕ್ತಿಯೋರ್ವರು ವಾಹನದ ವ್ಯವಸ್ಥೆಯನ್ನು ಕಲ್ಪಸುವ ಮೂಲಕ ಮುನ್ನೂರು ಗ್ರಾ.ಪಂ ವ್ಯಾಪ್ತಿಯ ಟಾಸ್ಕ್ ಫೋರ್ಸ್ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದೆ ಎಂದು ಮುನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ ಹೇಳಿದರು.

ಅವರು ಮುನ್ನೂರು ಗ್ರಾ.ಪಂ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ಯಾನರ್ ವಿತರಿಸಿ ಮಾತನಾಡಿದರು. ಗ್ರಾಮದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾದ ಸಂದರ್ಭ ತುರ್ತು ಸಭೆಯನ್ನು ನಡೆಸಿ ಆಶಾ ಕಾರ್ಯಕರ್ತೆಯರಿಗೆ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಪಂಚಾಯಿತಿನಲ್ಲಿ ಸಾಮಾನ್ಯ ಸಭೆಯಲ್ಲಿ ಪಂ. ಸದಸ್ಯರೆಲ್ಲರೂ ಕೈಗೊಂಡ ತೀರ್ಮಾನದಂತೆ, ಊರವರ ಸಹಕಾರದಿಂದ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿದೆ ಎಂದರು.

ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾಜೀವ ನಾಯಕ್, ನೋಡೆಲ್ ಅಧಿಕಾರಿ ಸತೀಶ್, ಉಪಾಧ್ಯಕ್ಷೆ ರಾಜೇಶ್ವರಿ, ಕಂದಾಯ ಇಲಾಖೆ ಸಿಬ್ಬಂದಿ ಕುಮಾರಿ ರೇಷ್ಮಾ ,ಯು.ಟಿ.ಕೆ ಕೋವಿಡ್ ಕೇರ್ ಮುನ್ನೂರು ವಲಯ ಅಧ್ಯಕ್ಷ ಅಬ್ದುಲ್ ಅಝೀಝ್ ಸಿ.ಆರ್.ಕೆ, ಸದಸ್ಯರುಗಳಾದ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *