Header Ads
Breaking News

ಮೂಡುಬಿದರೆ ಪುರಸಭೆಯ ವಿಶೇಷ ಸಭೆ

ಮೂಡುಬಿದಿರೆ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕಳೆದ ವರ್ಷ ಚಾಲ್ತಿಯಲ್ಲಿದ್ದ ಆಸ್ತಿ ತೆರಿಗೆಗಿಂತ ಈ ವರ್ಷ 0.6%-0.7%ವರೆಗೆ ಆಸ್ತಿ ತೆರಿಗೆ ಹಾಗೂ ಖಾಲಿ ಸ್ಥಳಕ್ಕೆ 0. 2% ಹೆಚ್ಚಳಕ್ಕೆ ಪುರಸಭೆಯು ವಿಶೇಷ ಸಭೆಯಲ್ಲಿ ಪ್ರತಿಪಕ್ಷಗಳ ಆಕ್ಷೇಪಗಳ ಮಧ್ಯೆಯೇ ಹಿಂದಿನ ತೆರಿಗೆಗಿಂತ ರೂ 100ಗಳಷ್ಟು ಹೆಚ್ಚು ಹೊರೆಯಾಗದಂತೆ ಮತ್ತು ಬಡ ಸಾಮಾನ್ಯ ಜನರಿಗೆ ಕಡಿಮೆ ಹೊರೆಯಾಗುವಂತೆ ತೆರಿಗೆ ಹೆಚ್ಚಿಸಲು ನಿರ್ಣಯ ಕೈಗೊಳ್ಳಲಾಯಿತು.

ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಬಡ ಮಧ್ಯಮ ವರ್ಗದ ಜನರಿಗೆ ತೊಂದರೆಯಾಗದಂತೆ ಆಸ್ತಿ ತೆರಿಗೆ ಹೆಚ್ಚಳದ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಳೆದ 2 ತಿಂಗಳ ಸಭೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದೆಂದು ನಿರ್ಧರಿಸಲಾಗಿತ್ತು. ಈ ಹಿನ್ನಲೆಯಲ್ಲಿ ನಡೆದ ವಿಶೇಷ ಸಭೆಯಲ್ಲೂ ಪ್ರತಿ ಪಕ್ಷಗಳ 11 ಸದಸ್ಯರು ಕೊರೋನಾ ಸಂಕಷ್ಠದ ಕಾರಣ ನೀಡಿ ಆಸ್ತಿ ತೆರಿಗೆ ಒಂದು ವರ್ಷ ಮುಂದೂಡುವಂತೆ ಮನವಿ ಮಾಡಿದರು. ಈ ವೇಳೆ ಪ್ರತಿಪಕ್ಷಗಳ ಸದಸ್ಯರನ್ನು ಸಮಧಾನ ಪಡಿಸಿದ ಶಾಸಕ ಉಮಾನಾಥ ಕೋಟ್ಯಾನ್ ಕೇಂದ್ರದ ಅನುದಾನ ಪಡೆಯಲು ತೆರಿಗೆ ಹೆಚ್ಚಳ ಅನಿವಾರ್ಯ ಎಂದರು.
ಕಂದಾಯ ಅಧಿಕಾರಿ ಪುರುಷೋತ್ತಮ ಆಸ್ತಿ ತೆರಿಗೆಯ ಬಗ್ಗೆ ಮಾಹಿತಿ ನೀಡಿದರು. ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಸ್ಥಾಯಿ ಸಮಿತಿ ಸದಸ್ಯ ನಾಗರಾಜ ಪೂಜಾರಿ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಕಂದಾಯ ಅಧಿಕಾರಿ ಪುರುಷೋತ್ತಮ ಹಾಗೂ ಮೆಸ್ಕಾಂ ಅಧಿಕಾರಿ ಪ್ರವೀಣ್ ಮತ್ತು ಪುರಸಭಾ ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *