Header Ads
Breaking News

ಪ್ರಧಾನಿ ನರೇಂದ್ರ ಮೋದಿಗೆ ನಾಚಿಕೆಯಾಗಬೇಕು : ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ

ರಾಜ್ಯದಲ್ಲಿ ಕೊರೋನಾ ಸೋಂಕಿತರನ್ನು ಬದುಕಿಸಲು ಆರೋಗ್ಯ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಒತ್ತಾಯಿಸಿದ್ದಾರೆ. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ತಡೆಗಟ್ಟಲು ಸರ್ಕಾರ ಯಾವುದೇ ನಿರ್ದಿಷ್ಟ ಕಾರ್ಯಕ್ರಮ ನಡೆಸಿಲ್ಲ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವು ಆಗ್ತಾ ಇದೆ. ಸರ್ಕಾರಕ್ಕೆ ಯಾವುದೇ ಜವಾಬ್ದಾರಿ ಇಲ್ಲ. ರಾಜ್ಯದಲ್ಲಿ ಆಡಳಿತ ಸತ್ತು ಹೋಗಿದೆ ಎಂದು ರಾಜ್ಯ ಸರ್ಕಾರ ವಿರುದ್ಧ ಕಿಡಿಕಾರಿದರು. ಇನ್ನು ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ್ರೂ, ಕೋವಿಡ್ ನಿಯಂತ್ರಿಸಲು ಕೇಂದ್ರ ಹಾಗು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿಗೆ ನಾಚಿಕೆಯಾಗಬೇಕು. ಬೇರೆ ದೇಶವರು ಆಕ್ಸಿಜನ್ ಕೊಡಬೇಕೇ ಎಂದು ಅವರು ಪ್ರಶ್ನಿಸಿದ್ರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ವಿವೇಕ್ ರೈ, ದೀಕ್ಷಿತ್, ಪದ್ಮನಾಭ, ಆರೀಫ್, ಪ್ರಕಾಶ್ ಸಾಲಿಯಾನ್, ಶಶಿಧರ್ ಹೆಗ್ಡೆ , ಮೊಹಮ್ಮದ್ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ರು.

Related posts

Leave a Reply

Your email address will not be published. Required fields are marked *