Header Ads
Breaking News

ರಾಜ್ಯಾದ್ಯಂತ ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅತ್ತ ಸರ್ಕಾರ ಖಾಸಗಿ ಬಸ್ ಗಳನ್ನು ಬಳಸಲು ಅವಕಾಶ ನೀಡಿದ್ದರೆ, ಇತ್ತರ ಸಾರಿಗೆ ನೌಕರರೂ ಪಟ್ಟು ಬಿಡದೆ ಮುಷ್ಕರ ಮುಂದುವರಿಸಿದ್ದಾರೆ.ಇಂದು ಸಹ ಯಾವುದೇ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ಹೆಚ್ಚಿನೆಡೆ ಖಾಸಗಿ ಬಸ್ ಗಳನ್ನು ಬಳಸಲಾಗುತ್ತಿದೆ. ಆದರೆ ಪ್ರಯಾಣಿಕರು ಮಾತ್ರ ಪರದಾಡುವಂತಾಗಿದೆ.ರಾಜ್ಯ ಸಾರಿಗೆ ನೌಕರರ ಮುಷ್ಕರದಿಂದಾಗಿ ಬೆಂಗಳೂರು ವಿವಿ ಮತ್ತು ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಿವೆ.ಖಾಸಗಿ ಬಸ್ ಗಳೇ ಹೆಚ್ಚಾಗಿ ಓಡಾಡುವ ಕರಾವಳಿ ಜಿಲ್ಲೆಗಳಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಅಷ್ಟಾಗಿ ತಟ್ಟಿಲ್ಲ. ಹೊರಜಿಲ್ಲೆಗಳಿಗೆ ಹೋಗುವ ಕೆಲ ಪ್ರಯಾಣಿಕರು ಪರದಾಡಿದರೂ, ಖಾಸಗಿ ಬಸ್ ಗಳನ್ನು ಬಳಸಿದ್ದರಿಂದ ದೊಡ್ಡ ಮಟ್ಟದ ತೊಂದರೆ ಸಂಭವಿಸಿಲ್ಲ.

Related posts

Leave a Reply

Your email address will not be published. Required fields are marked *