Header Ads
Breaking News

ರಾಜ್ಯಾದ್ಯಂತ ಲಾಕ್‍ಡೌನ್ : ಮಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ

ಕೋವಿಡ್ ಸೋಂಕು ನಿಯಂತ್ರಣಕ್ಕೆ ರಾಜ್ಯಾದ್ಯಂತ 14 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದೇ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿರುವುದಾಗಿ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಗ್ಗೆ 6 ಗಂಟೆವರೆಗೆ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದೇ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಯೂ ಹೆಚ್ಚು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆದೇಶದಂತೆ 54 ಚಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಅಲ್ಲದೆ ಮೂರು ಶಿಫ್ಟ್ ಗಳಲ್ಲಿ ಪೆÇಲೀಸ್ ಅಧಿಕಾರಿಗಳು ಕೆಲಸ ಮಾಡುವ ಮೂಲಕ ಸರ್ಕಾರದ ನಿಯಮಗಳನ್ನು ಪಾಲಿಸಲಾಗುವುದು ಎಂದು ಎನ್ ಶಶಿಕುಮಾರ್ ತಿಳಿಸಿದ್ದಾರೆ.

ನಿಯಮಗಳನ್ನು ಯಾರಾದರು ಉಲ್ಲಂಘನೆ ಮಾಡಿದರೆ ಅದನ್ನು ತಡೆಯಲು ಪ್ರತೀ ಠಾಣೆಯಲ್ಲಿ 2 ಸ್ಕ್ವಾರ್ಡ್‍ಗಳನ್ನು ನೇಮಕ ಮಾಡಲಾಗಿದೆ. ಅಲ್ಲದೆ ಶೇ 50 ರಷ್ಟು ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕೋವಿಡ್ ಸೋಂಕು ಹೆಚ್ಚುತ್ತಿರುವುದರಿಂದ ಸರ್ಕಾರ ಕೈಗೊಂಡಿರುವ ನಿಯಮಗಳನ್ನು ಎಲ್ಲರೂ ಪಾಲಿಸಬೇಕು ಎಂದು ಅವರು ತಿಳಿಸಿದರು. ಮಂಗಳೂರು ನಗರದಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಎಲ್ಲಾ ವಾಹನಗಳು ನಿಂತಿದ್ದವು. ಲಾಕ್ ಡೌನ್ ಗೆ ಜಿಲ್ಲೆಯ ಜನ ಸ್ಪಂದಿಸುತ್ತಿದ್ದಾರೆ. ಯಾರು ಕೂಡ ಕಾನೂನನ್ನು ಉಲ್ಲಂಘನೆ ಮಾಡಬೇಡಿ. ಅನಗತ್ಯವಾಗಿ ಓಡಾಡಿದ್ರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಎಚ್ಚರಿಗೆ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *