Header Ads
Breaking News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಮಂಗಳೂರಿಗೆ ಆಗಮನ

ರಾಜ್ಯ ಸಚಿವ ಸ್ಥಾನಮಾನದ ಅಧಿಕಾರ ಸ್ವೀಕರಿಸಿದ ಕರ್ನಾಟಕ ಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಮೊದಲ ಬಾರಿಗೆ ನಗರಕ್ಕೆ ಅಗಮಿಸಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು, ಈ ವೇಳೆ ಮಾತನಾಡಿದ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಜನರಿಗೆ ಮನೆ ಒದಗಿಸಿ ಡೇರೆ ಮುಕ್ತ ಕರ್ನಾಟಕ ನಿರ್ಮಿಸುವ ಗುರಿ ಹೊಂದಲಾಗಿದೆ. ನನ್ನ ಅಧ್ಯಕ್ಷತೆಯ ಅವಧಿಯಲ್ಲಿ ರಾಜ್ಯದ ಕೆಲ ಜಿಲ್ಲೆಯನ್ನಾದರೂ ಡೇರೆ ಮುಕ್ತ ಜಿಲ್ಲೆಗಳನ್ನಾಗಿ ರೂಪಿಸಲಾಗುವುದು. ಅಲೆಮಾರಿ ಸಮುದಾಯಗಳಿಗೆ ನ್ಯಾಯ ಒದಗಿಸಿ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಮಾಡುತ್ತೆನೇ, ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮ ಸಿಎಂ ಯಡಿಯೂರಪ್ಪನವರ ಕನಸಿನ ಕೂಸು ಅಗಿದೆ ಎಂದರು.

Related posts

Leave a Reply

Your email address will not be published. Required fields are marked *