Header Ads
Breaking News

ರೈತರಿಂದ‌ ಕರಾಳ ದಿನಾಚರಣೆ

ಕೃಷಿ ಕಾಯ್ದೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಆರು ತಿಂಗಳು ಪೂರ್ಣಗೊಂಡಿರುವ ಹಿನ್ನೆಲೆ ಹಾಗೂ ಕೇಂದ್ರ ಸರ್ಕಾರ ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯದನ್ನು ವಿರೋಧಿಸಿ ದೇಶಾದ್ಯಂತ ರೈತ ಮುಖಂಡರು ಇಂದು ಕರಾಳ ದಿನವನ್ನು ಆಚರಿಸುತ್ತಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟ ಜಂಟಿಯಾಗಿ ಕರಾಳ ದಿನ ಆಚರಿಸಲು ಕರೆ ನೀಡಿದ್ದು, ಅದರಂತೆ ತಮ್ಮ ತಮ್ಮ ಮನೆಗಳು ಹಾಗೂ ವಾಹನಗಳ ಮೇಲೆ ಕಪ್ಪು ಬಾವುಟ ಹಾರಿಸಿ, ಕಪ್ಪು ಪಟ್ಟಿ, ಕಪ್ಪು ಮಾಸ್ಕ್, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗ್ರಾಮಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಸಹಿತ ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸುವ ಮೂಲಕ ಹಾಗೂ ರಾಜ್ಯದಲ್ಲೂ ಕೂಡ ಸಂಯುಕ್ತ ಹೋರಾಟ- ಕರ್ನಾಟಕವು ರಾಜ್ಯದ ರೈತರು ಕರಾಳ ದಿನವನ್ನು ಆಚರಿಸುತ್ತಿದ್ದಾರೆ.

ನವೆಂಬರ್ 26 ರಂದು ಮೂರು ಕೃಷಿ ಕಾಯ್ದೆಗಳ ರದ್ದತಿಗಾಗಿ, ವಿದ್ಯುತ್ ಮಸೂದೆ ವಾಪಸ್ಸಾತಿಗಾಗಿ ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಖಾತರಿ ಕಾನೂನು ಜಾರಿ ಮಾಡಲು ಆಗ್ರಹಿಸಿ ದೆಹಲಿ ಚಲೋಗೆ ಬಂದಿದ್ದ ಲಕ್ಷಾಂತರ ರೈತರನ್ನು ದೆಹಲಿ ಗಡಿಗಳಲ್ಲಿ ತಡೆ ಹಿಡಿಯಲಾಗಿತ್ತು. ಅದೇ ದಿನ ಇಡೀ ದೇಶದಾದ್ಯಂತ ಕಾರ್ಮಿಕ ಸಂಹಿತೆಗಳ ವಿರುದ್ಧ ಹಾಗೂ ಖಾಸಗೀಕರಣ ನೀತಿ ಖಂಡಿಸಿ ಕಾರ್ಮಿಕರು ದೇಶಾದ್ಯಂತ ಮುಷ್ಕರ ನಡೆಸಿದ್ದರು. ಈಗಲೂ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಇದುವರೆಗೂ ಸ್ಪಂದಿಸಿಲ್ಲ

Related posts

Leave a Reply

Your email address will not be published. Required fields are marked *