Header Ads
Breaking News

ಲಸಿಕೆ ಸಿಗುವಾಗ ವಿಳಂಬ ಸಾಧ್ಯತೆ : ಶಾಸಕ ಉಮಾನಾಥ ಕೋಟ್ಯಾನ್

ಕೊರೋನಾ ಲಸಿಕೆಯ ಬಗ್ಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಪ್ರತಿಯೊಬ್ಬರಿಗೂ ಲಸಿಕೆ ಸಿಗುವಾಗ ವಿಳಂಬವಾಗಬಹುದು. ತ್ವರಿತವಾಗಿ ಲಸಿಕೆ ಲಭಿಸಲು ಸರಕಾರವು ಸರ್ವ ಪ್ರಯತ್ನ ಮಾಡುತ್ತಿದೆ ಎಂದು ಮೂಡುಬಿದರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಅವರು ತಾಲೂಕು ಮಟ್ಟದ ಕೊರೋನಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದರು. ಟಾಸ್ಕ್ ಫೋರ್ಸ್ ಸದಸ್ಯರು ಇದನ್ನು ಜನರಿಗೆ ಮನವರಿಕೆ ಮನವರಿಕೆ ಮಾಡಬೇಕು. ಜಿಲ್ಲೆಗೆ ಹೋಲಿಸಿದರೆ ಮೂಡುಬಿದಿರೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಕಡಿಮೆಯಿದೆ ಮುನ್ನೆಚ್ಚರಿಕೆ ಕ್ರಮವಾಗಿ ಮೂಡುಬಿದಿರೆಯಲ್ಲಿರುವ ಬಿಸಿಎಂ ಹಾಸ್ಟೆಲ್‍ಗಳು, ಮೊರಾರ್ಜಿದೇಸಾಯಿ ವಸತಿ ಶಾಲೆಗಳು ಹಾಗೂ ಕನ್ನಡ ಭವನದಲ್ಲಿ ಬೆಡ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಹಾಗೂ ಉಚಿತವಾಗಿ ಊಟೋಪಚಾರದ ವ್ಯವಸ್ಥೆಯನ್ನು ಮಾಡಲಾಗುವುದು ಹೀಗಾಗಿ ಯಾರೂ ಆತಂಕ ಪಡಬೇಕಾಗಿಲ್ಲ.ಸರಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸುವ ಮೂಲಕ ಕೊರೋನಾ ತಡೆಗಟ್ಟಲು ಸಹಕರಿಸಬೇಕು ಎಂದರು.
ಪುರಸಭಾ ಮುಖ್ಯಾಧಿಕಾರಿ ಇಂದು ಎಂ ಪುರಸಭೆಯಿಂದ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪ್ರಭಾರ ತಹಶೀಲ್ದಾರ್ ಡಾ. ವೆಂಕಟೇಶ್ ನಾಯಕ್ ಅವರು ತಾಲೂಕು ಆಡಳಿತದ ವತಿಯಿಂದ ಕಾರ್ಯಯೋಜನೆಗಳ ಬಗ್ಗೆ, ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ದಿನೇಶ್ ಬಿ.ಎಸ್ ಅವರು ಕಾನೂನು ಸುವ್ಯವಸ್ಥೆ ಪಾಲಿಸುವ ನಿಟ್ಟಿನಲ್ಲಿ ಇರುವ ಕೆಲವೊಂದು ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಎಪಿಎಂಸಿ ಅಧ್ಯಕ್ಷ ಕೆ.ಕೃಷ್ಣರಾಜ ಹೆಗ್ಡೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಶಿಕಲಾ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *