Header Ads
Breaking News

ಲಾಕ್‍ಡೌನ್ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಪೊಲೀಸರಿಂದ ಕಟ್ಟೆಚ್ಚರ

ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.ಚೆಕ್‍ಪೆÇೀಸ್ಟ್‍ಗಳನ್ನು ನಿರ್ಮಿಸಿ ತಪಾಸಣೆ ನಡೆಸುತ್ತಿರುವ ಪೊಲೀಸರು, ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ವಾಹನಗಳ ವಿರುದ್ಧ ಕ್ರಮ ಜರಗಿಸುತ್ತಿದ್ದಾರೆ. ಉಡುಪಿ ನಗರದಲ್ಲಿ ಬೆಳಗ್ಗೆಯಿಂದ ಕೆಲವು ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗಾಗಿ ದ್ವಿಚಕ್ರ ವಾಹನಗಳಲ್ಲಿ ಹಾಗೂ ಕಾರುಗಳಲ್ಲಿ ಆಗಮಿಸುತ್ತಿರುವುದು ಕಂಡುಬಂತು. ಈ ಹಿನ್ನೆಲೆಯಲ್ಲಿ ಪೊಲೀಸರು ತಪಾಸಣೆ ಕಾರ್ಯ ನಡೆಸಿದರು.ಕಾಪು, ಕುಂದಾಪುರ, ಹೆಬ್ರಿ, ಮಲ್ಪೆ, ಕಾರ್ಕಳ, ಪಡುಬಿದ್ರೆಗಳಲ್ಲೂ ಚೆಕ್ ಪೊಸ್ಟ್‍ಗಳನ್ನು ನಿರ್ಮಿಸಿ ಕಾರಣ ಇಲ್ಲದೆ ತಿರುಗಾಡುತ್ತಿದ್ದ ವಾಹನಗಳ ವಿರುದ್ಧಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ನಗರದ ವಿವಿಧ ಕಡೆಗಳಲ್ಲಿ ಅಧಿಕಾರಿಗಳು ಆಗಮಿಸಿ ತಪಾಸಣಾ ಕಾರ್ಯವನ್ನು ಪರಿಶೀಲಿಸಿದರು. ಎಲ್ಲ ಕಡೆಗಳಲ್ಲಿಯೂ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

Related posts

Leave a Reply

Your email address will not be published. Required fields are marked *