Header Ads
Breaking News

ವಿಜಯಪುರ ಜಿಲ್ಲೆಯಲ್ಲಿ 26 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ

ವಿಜಯಪುರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‍ನ 26 ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದರು.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಅವರು, ಬ್ಲ್ಯಾಕ್ ಫಂಗಸ್ ರೋಗಿಗಳಿಗಾಗಿ ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಹೆಚ್ಚು ಪ್ರಕರಣಗಳಿರುವ ಸಾಧ್ಯತೆ ಇದೆ ಎಂದು ಅಂದಾಜಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಇನ್ನೂ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಅಂಥ ಪ್ರಕರಣ ಕಂಡು ಬಂದರೆ ಅಲ್ಲಿಯೂ ಪ್ರತ್ಯೇಕ ವಾರ್ಡ್ ಮಾಡುವ ಯೋಚನೆ ಇದೆ ಎಂದು ವಿಜಯಪುರ ತಿಳಿಸಿದ್ದಾರೆ. ಈವರೆಗೆ ರಾಜ್ಯಾದ್ಯಂತ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಬಗ್ಗೆ ಕೇಳಿದ್ದ ವಿಜಯಪುರ ಜಿಲ್ಲೆಯ ಜನತೆಗೆ ವಿಜಯಪುರ ಜಿಲ್ಲೆಯಲ್ಲಿಯೂ ಬ್ಲ್ಯಾಕ್ ಫಂಗಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಂತಕ ಮೂಡಿಸಿದೆ.

Related posts

Leave a Reply

Your email address will not be published. Required fields are marked *