Header Ads
Breaking News

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದಲ್ಲಿ ಸೋಮವಾರ ನಡೆದಿದೆ.

ಮೃತ ವ್ಯಕ್ತಿ ಯನ್ನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜು (35) ಎಂದು ಗುರುತಿಸಲಾಗಿದೆ.ಲಿಜು ಅವರು ಸೋಮವಾರ ಬೆಳಗ್ಗೆ ತನ್ನ ಮನೆಯ ಮುಂಭಾಗದಲ್ಲಿ ಕಬ್ಬಿಣದ ಸಲಾಕೆಯಿಂದ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಸಲಾಕೆಯು ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಹರಿದು ಲಿಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

Leave a Reply

Your email address will not be published. Required fields are marked *