Header Ads
Breaking News

ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಹೆಚ್ಚು ಹಾಲು ಕುಡಿಯಿರಿ ಯೋಜನೆ

ಹಾಲನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡುವ ಹಿನ್ನೆಲೆಯಲ್ಲಿ ಹಾಗೂ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಜೂನ್ 1ರಿಂದ ಜೂನ್ 30ರ ವರೆಗೆ ಎಲ್ಲಾ ಮಾದರಿಯ ನಂದಿನಿ 500 ಮಿ.ಲೀ. ಹಾಗೂ 1 ಲೀ. ಹಾಲಿನ ಪೊಟ್ಟಣಗಳ ಮೇಲೆ ತಲಾ 20 ಮಿ.ಲೀ. ಹಾಗೂ 40 ಮಿ.ಲೀ. ಹಾಲನ್ನು ಉಚಿತವಾಗಿ ಗ್ರಾಹಕರಿಗೆ ನೀಡಿ “ಹೆಚ್ಚು ಹಾಲು ಕುಡಿಯಿರಿ”ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ ಕೊಡವೂರು ರವಿರಾಜ ಹೆಗ್ಡೆಯವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ ಅವರು, ರಾಜ್ಯಾದ್ಯಂತ ಕೊರೋನಾ ಸೋಂಕಿನ 2ನೇ ಅಲೆಯು ತೀವ್ರವಾಗಿದ್ದು, ಎಪ್ರಿಲ್ 28ರಿಂದ ಲಾಕ್‍ಡೌನ್ ಇರುವ ಹಿನ್ನೆಲೆಯಲ್ಲಿ, ಕ್ಲಿಷ್ಟಕರ ಪರಿಸ್ಥಿತಿಯಲ್ಲಿಯೂ ಕೂಡಾ ಹಾಲು ಉತ್ಪಾದಕರು ಸಂಘಗಳಿಗೆ ಗುಣಮಟ್ಟದ ಹಾಲನ್ನು ಪೂರೈಸುತ್ತಿದ್ದು, “ನಂದಿನಿ” ಬಳಗವು ಜೀವಭಯ ತೊರೆದು, ಗ್ರಾಹಕರಿಗೆ ಅಗತ್ಯ ಸೇವೆಗಳಲ್ಲೊಂದಾದ ಹಾಲು ಪೂರೈಸುವ ಮೂಲಕ ಗ್ರಾಹಕರ ಸೇವೆಯಲ್ಲಿ ತೊಡಗಿದ್ದಾರೆ. ಇನ್ನು ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಜೂನ್ 1ರಿಂದ 30ರ ವರೆಗೆ “ಹೆಚ್ಚು ಹಾಲು ಕುಡಿಯಿರಿ”ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಂಡು ಆರೋಗ್ಯ ವೃದ್ಧಿಸಿ, ಸದೃಢರಾಗಿ ಎಂದು ಹೇಳಿದರು.
ಕರ್ನಾಟಕ ಹಾಲು ಮಹಾಮಂಡಲ ಅಧೀನದಲ್ಲಿರುವ 14 ಒಕ್ಕೂಟಗಳಲ್ಲಿ ಏಕಕಾಲಕ್ಕೆ 1 ಲೀಟರ್ ಹಾಲಿನ ಖರೀದಿಗೆ 40 ಮಿ.ಲೀ. ಉಚಿತ ಹಾಲು ಯೋಜನೆ ಜಾರಿಯಾಗುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಂಡು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಹೆಚ್ಚು ಬಳಸಲು ಕರೆ ನೀಡುತ್ತಾ, ಒಕ್ಕೂಟದ ಸಿಬ್ಬಂದಿಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಗಳನ್ನು “ಕೊರೋನಾ ವಾರಿಯರ್ಸ್” ಎಂದು ಗುರುತಿಸಲುಕರ್ನಾಟಕ ಹಾಲು ಮಹಾಮಂಡಳಿ ಮತ್ತು ದಕ್ಷಿಣಕನ್ನಡ ಹಾಲು ಒಕ್ಕೂಟದ ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿಯವರು ಕಹಾಮ ಮೂಲಕ ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.

Related posts

Leave a Reply

Your email address will not be published. Required fields are marked *