Header Ads
Breaking News

ವೀಕೆಂಡ್ ಕರ್ಪ್ಯೂಗೆ ಕಂಗಲಾದ ವ್ಯಾಪಾರಿಗಳು

ಕೋವಿಡ್ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್  ಕರ್ಪ್ಯೂ ಘೋಷಣೆ ಮಾಡಿದ್ದಾರೆ. ಇದರಿಂದ ವ್ಯಾಪಾರ ಮಾಡುವ ವ್ಯಾಪಾರಸ್ಥರಿಗೆ ತುಂಬಾ ತೊಂದರೆಯಾಗಿದೆ. ವ್ಯಾಪಾರ ಇಲ್ಲದೆ ಅಂಗಡಿಯಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ಸಂಬಳ ಕೊಡಲು ಕಷ್ಟವಾಗಿದೆ ಎಂದು ವಿ4 ನ್ಯೂಸ್ ಮಾಧ್ಯಮಕ್ಕೆ ವ್ಯಾಪಾರಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ರಾಜ್ಯಾದ್ಯಂತ ವೀಕೆಂಡ್  ಕರ್ಪ್ಯೂ ಘೋಷಣೆ ಮಾಡಿದ್ದಾರೆ. ಇದರಿಂದ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ತುಂಬಾ ತೊಂದರೆಯಾಗಿದೆ. ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿದ್ದು, ಸರ್ಕಾರದ ನಿಯಮ ಪಾಲಿಸುತ್ತಿದ್ದಾರೆ. ಈ ಬಗ್ಗೆ ವ್ಯಾಪಾರಿಯೊಬ್ಬರು ಮಾತನಾಡಿ, ನಾವು ಸಣ್ಣಪುಟ್ಟ ವ್ಯಾಪಾರ ಮಾಡುವವರು. ವ್ಯಾಪಾರ ಇಲ್ಲದೆ ತುಂಬಾ ಕಷ್ಟವನ್ನು ಅನುಭವಿಸುವಂತಾಗಿದೆ ಎನ್ನುತ್ತಾರೆ. ಇನ್ನೂ ಹೂವಿನ ವ್ಯಾಪಾರಿಗಳು ವ್ಯಾಪಾರ ಇಲ್ಲದೆ ಕಂಗಲಾಗಿದ್ದು, ಜೀವನ ನಡೆಸುವುದು ಹೇಗೆ ಎಂಬ ಚಿಂತೆಯಲ್ಲಿದ್ದಾರೆ. ಇನ್ನು ಇಂದು ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಅಂಗಡಿಗಳು ತೆರೆದಿದ್ದು, ಬೆರಳೆಣಿಕೆಯ ಮಂದಿ ಮಾತ್ರ ಇದರ ಸದುಪಯೋಗ ಪಡೆದುಕೊಂಡಿದ್ದಾರೆ.

Related posts

Leave a Reply

Your email address will not be published. Required fields are marked *