Header Ads
Breaking News

ಶಾಸಕ ಡಾ.ಭರತ್ ಶೆಟ್ಟಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಭೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಕುಳಾಯಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುರುವಾರ ಮರುಭೇಟಿ ನೀಡಿದ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಅಲ್ಲಿ ತಾವು ಬುಧವಾರ ಸೂಚಿಸಿದ ಕ್ರಮಗಳು ಸಮರ್ಪಕವಾಗಿ ಅನುಷ್ಟಾನಕ್ಕೆ ಬಂದಿರುವುದನ್ನು ಪರಿಶೀಲಿಸಿದರು. ಆ ಬಳಿಕ ಮನಪಾ ಸದಸ್ಯರೊಂದಿಗೆ ನೋಡಲ್ ಅಧಿಕಾರಿಗಳ, ವೈದ್ಯರ, ಆಶಾ ಕಾರ್ಯಕರ್ತೆಯರ ಸಭೆ ನಡೆಸಿದರು. ಕೊರೊನಾ ನಿಯಂತ್ರಣಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಟಾಸ್ಕ್ ಪೆÇೀರ್ಸ್ ಸದಸ್ಯರ ಜವಾಬ್ದಾರಿಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಶಾಸಕರೊಂದಿಗೆ ಪಾಲಿಕೆ ಸದಸ್ಯರಾದ ವೇದಾವತಿ,ವರುಣ್ ಚೌಟ, ಸರಿತಾ ಶಶಿಧರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *