Header Ads
Breaking News

ಶ್ರೀನಿವಾಸ್ ವಿಶ್ವವಿದ್ಯಾಲಯ : ಸ್ಥಾಪಕರ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭ

ಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಬಲೇಶ್ವರ ಎಂ.ಎಸ್.ರವರು ದಕ್ಷಿಣ ಕನ್ನಡ ಜಿಲ್ಲೆಗೆ ಅವರು ಬ್ಯಾಂಕಿಂಗ್ ಸಾಲ ಯೋಜನೆ, ಹಣಕಾಸು ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ನೀಡಿದ ಕೊಡುಗೆಯನ್ನು ಗುರುತಿಸಿ ಅವರಿಗೆ 2021ನೇ ಸಾಲಿನ ಎ. ಶಾಮರಾವ್ ಸ್ಮಾರಕ ಸಾಧಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‍ನಲ್ಲಿ ನಡೆದ ಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಗಣ್ಯರು ನೀಡಿ, ಗೌರವಿಸಿದ್ರು. ಇದಲ್ಲದೆ ಅವಿಭಜಿತದಕ್ಷಿಣಕನ್ನಡಜಿಲ್ಲೆಯ ಪ್ರೌಢ ಶಾಲಾ ವಿಭಾಗ ಹಾಗೂ ಪದವಿ ಪೂರ್ವ ವಿಭಾಗದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಿರುವ ಬ್ರಹ್ಮಾವರದ ಲಿಟಲ್ ರಾಕ್ ಇಂಡಿಯನ್ ಸ್ಕೂಲ್‍ನ ಶಿಕ್ಷಕರಾದ ಶ್ರೀ ಹರಿಕೃಷ್ಣದಂಬೆ ಇವರಿಗೆ ಎ.ಶಾಮರಾವ್ ಸ್ಮಾರಕ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಚೆಯರ್ ಮನ್ ಅಲೆನ್ ಸಿ.ಎ. ಪಿರೇರಾ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಎ. ಶಾಮರಾವ್ ಫೌಂಡೇಶನ್‍ನ ಅಧ್ಯಕ್ಷ ಡಾ. ಸಿ.ಎಎ. ರಾಘವೇಂದ್ರರಾವ್ ವಹಿಸಿದ್ರು. ಶ್ರೀನಿವಾಸ್ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ.ಎ. ಶ್ರೀನಿವಾಸ್‍ರಾವ್, ಕುಲಪತಿ ಡಾ. ಪಿ.ಎಸ್.ಐತಾಳ್, ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರುಗಳಾದ ವಿಜಯಲಕ್ಷ್ಮಿಆರ್.ರಾವ್, ಪ್ರೊ .ಎ. ಮಿತ್ರಾ ಎಸ್. ರಾವ್, ಕುಲಸಚಿವರುಗಳಾದ ಡಾ.ಅನಿಲ್ ಕುಮಾರ್, ಡಾ. ಮೌಲ್ಯಮಾಪನ ಕುಲಸಚಿವ ಶ್ರೀನಿವಾಸ್ ಮಯ್ಯ ಅಭಿವೃದ್ಧಿ ಕುಲ ಸಚಿವ ಡಾ. ಅಜಯ್‍ಕುಮಾರ್, ಶೈಕ್ಷಣಿಕ ಮತ್ತು ಅಭಿವೃದ್ಧಿ ಕುಲಸಚಿವ ಆದಿತ್ಯಕುಮಾರ್, ಕುಮಾರಿ ಮೇಘನಾ ಹಾಗೂ ಮಾಸ್ಟರ್ ಇಶಾನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *