Header Ads
Breaking News

ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪೊಲೀಸ್ ಸಿಬ್ಬಂದಿಗಳಿಗಾಗಿ ಕೋವಿಡ್ ಕೇರ್ ಸೆಂಟರ್

ಕೋವಿಡ್ ಸೋಂಕಿತ ಪೊಲೀಸ್ ಸಿಬ್ಬಂದಿ ಹಾಗೂ ಕುಟುಂಬಸ್ಥರಿಗೆ ಮಂಗಳೂರಿನ ಸೈಂಟ್ ಆಲೋಶಿಯಸ್ ಕಾಲೇಜಿನಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಗೊಂಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಹಾಗೂ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್,ಡಿಜಿಪಿ ಪ್ರವೀಣ್ ಸೂದ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. 18 ಬೆಡ್‍ಗಳು ಹೊಂದಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಆರಂಭಿಸಲಾಗಿದೆ ಎಂದು ಅವರು ಹೇಳಿದರು. ಇದೇವೇಳೆ ಮಾತನಾಡಿದ ಕಾಲೇಜಿನ ಫಾದರ್ ಸಿರೀಲ್ ಡಿಮೊಲ್ಲೋ , ಸಂತ ಅಲೋಶಿಯಸ್ ಕಾಲೇಜಿನ ವತಿಯಿಂದ ಫ್ರಂಟ್ ಲೈನ್ ವಾರಿಯರ್ಸ್‍ಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಅವರು ಹೇಳಿದರು. ಈ ವೇಳೆ ಕಾಲೇಜಿನ ಪ್ರಾಚಾರ್ಯ ಡಾ| ಪ್ರವೀಣ್ ಮಾರ್ಟಿಸ್, ಫಾದರ್ ಮೆಲ್ವಿನ್ ಜೋಸೆಫ್ ಪಿಂಟೋ ಮತ್ತಿತರು ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *