Header Ads
Breaking News

ಸಮಾಜಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟ ನಾಯಕ ಡಾ| ಬಿ.ಆರ್.ಅಂಬೇಡ್ಕರ್ : ಸಚಿವ ಅಂಗಾರ ಹೇಳಿಕೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ “ಡಾ.ಬಿ.ಆರ್.ಅಂಬೇಡ್ಕರ್‍ರವರ 130ನೆ ಜನ್ಮ ದಿನಾಚರಣೆ ಕಾರ್ಯಕ್ರಮ ಜರುಗಿತ್ತು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕಾ ಸಚಿವ ಅಂಗಾರ ಅವ್ರು ಉದ್ಘಾಟಿಸಿದ್ರು.

ಈ ವೇಳೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆಯ ಕಲ್ಪನೆಯೊಂದಿಗೆ ಸಂವಿಧಾನದ ಮೂಲಕ ಸಮಾಜಕ್ಕೆ ಮೇಲ್ಪಂಕ್ತಿಯನ್ನು ಹಾಕಿಕೊಟ್ಟ ನಾಯಕ ಡಾ.ಅಂಬೇಡ್ಕರ್ ಎಂದು ಅಭಿಪ್ರಾಯಪಟ್ಟರು. ಇನ್ನು ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ ಮಾತನಾಡಿ, 130 ಕೋಟಿಗೂ ಅಧಿಕ ಜನಸಂಖ್ಯೆಯನ್ನು ಹೊಂದಿರುವ ಈಗಿನ ಕಾಲಕ್ಕೂ ಸಂವಿಧಾನದ ಮೂಲಸ್ವರೂಪ ಇಂದಿಗೂ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ಅಂಬೇಡ್ಕರ್ ಜಯಂತಿ ಸೇರಿದಂತೆ ದೇಶದ ಮಹಾನ್ ಪುರುಷರ ಜನ್ಮ ದಿನ ಕೇವಲ ಯಾವುದೇ ಒಂದು ಜಾತಿ ಅಥವಾ ಕೇವಲ ಆಚರಣೆಗೆ ಸೀಮಿತಗೊಳ್ಳದೆ, ರಾಷ್ಟ್ರ ಹಬ್ಬವನ್ನಾಗಿ ಆಚರಿಸುವಂತಾಗಬೇಕು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಭಿಪ್ರಾಯಿಸಿದರು. ವೇದಿಕೆಯಲ್ಲಿ ಪಾಲಿಕೆ ಉಪ ಮೇಯರ್ ಸುಮಂಗಳ ರಾವ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವನೆ, ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ., ಪಾಲಿಕೆ ಜಂಟಿ ಆಯುಕ್ತ ಡಾ. ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ.ಯೋಗೀಶ್, ಸುರತ್ಕಲ್ ಗೋವಿಂದದಾಸ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಆಶಾಲತಾ ಪಿ., ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *