Header Ads
Breaking News

ಸೇವೆಯ ಮೂಲಕ ಸಂಘಟನೆ ಮಾಡೋಣ: ರಾಮದಾಸ್ ಬಂಟ್ವಾಳ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಸರಕಾರದ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿ ಕೊಂಡು ಏಳು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸೇವಾ ಕಾರ್ಯ ನಡೆಸುವಂತೆ ಬಿಜೆಪಿ ರಾಷ್ಟ್ರಧ್ಯಕ್ಷರ ನೀಡಿದ ಕರೆಯನ್ವಯ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಹಾಗೂ ಬಂಟ್ವಾಳ ಕ್ಷೇತ್ರ ಹಿಂದುಳಿದ ವರ್ಗಗಳ ಮೋರ್ಚಾದ ಜಂಟಿ ಆಶ್ರಯದಲ್ಲಿ ಕರೋನಾ ಫ್ರಂಟ್‌ಲೈನ್ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಆಹಾರದ ಪೊಟ್ಟಣ ನೀಡುವ ಕಾರ್ಯಕ್ರಮ ಭಾನುವಾರ ನಡೆಯಿತು.


ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸೈ ಪ್ರಸನ್ನ ಹಾಗೂ ಸಿಬ್ಬಂದಿಗಳಿಗೆ ಆಹಾರ ಪೊಟ್ಟಣ ನೀಡುವ ಮೂಲಕ ಈ ಸೇವಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬಳಿಕ ವೃತ್ತ ನಿರೀಕ್ಷಕರ ಕಚೇರಿ, ನಗರ ಪೊಲೀಸ್ ಠಾಣೆ, ಡಿವೈಎಸ್ಪಿ ಕಚೇರಿ, ಸಂಚಾರಿ ಪೊಲೀಸ್ ಠಾಣೆ ಸಹಿತ ಕಲ್ಲಡ್ಕ, ಮೆಲ್ಕಾರ್, ಬಿ.ಸಿ.ರೋಡು, ಕೈಕಂಬದಲ್ಲಿ ಕರ್ತವ್ಯ ನಿರತ ಪೊಲೀಸರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಆಹಾರ ಪೊಟ್ಟಣ ವಿತರಿಸಲಾಯಿತು.
ಈ ಸಂದರ್ಭ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿ 7 ವರ್ಷ ಪೂರ್ಣಗೊಂಡಿದ್ದು ಅದರ ಸಂಭ್ರಮಾಚರಣೆಯ ಬದಲು ಸೇವಾ ಹೀ ಸಂಘಟನೆಯ ಮೂಲಕ ಸೇವಾ ಕಾರ್ಯಗಳನ್ನು ಮಾಡಲು ಪಕ್ಷ ತೀರ್ಮಾನಿದೆ. ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಸೇವಾ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ಕರೋನಾ ಸಂದರ್ಭದಲ್ಲಿ ಜನರು ಮನೆಯಲ್ಲಿದ್ದಾಗ ಫ್ರಂಟ್ ಲೈನ್ ವಾರಿಯರ್ಸ್ ಗಳಾಗಿ ವೈದ್ಯರು, ದಾದಿಯರು, ಪೊಲೀಸರು, ಆಶಾಕಾರ್ಯಕರ್ತೆಯರು, ಪೌರಕಾರ್ಮಿಕರು, ಇತರ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಮುಂಚೂಣಿಯಲ್ಲಿ ನಿಂತು ಕೆಲಸವನ್ನು ಮಾಡಿದ್ದಾರೆ. ಇಂತಹವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಹಾಗೂ ಮುಂದೆಯೂ ಇಂತಹ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸ್ಪೂರ್ತಿ ತುಂಬುವ ನಿಟ್ಟಿನಲ್ಲಿ ಮತ್ತು ನಿಮ್ಮ ಜೊತೆ ನಾವಿದ್ದೇವೆ ಎನ್ನುವ ಪ್ರೀತಿಯನ್ನು ತೋರ್ಪಡಿಸುವ ಸಲುವಾಗಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ. ನಾರಾಯಣ್ ಮಾತನಾಡಿ ಬಂಟ್ವಾಳದಲ್ಲಿ ಎಲ್ಲಾ ಕಾರ್ಯಕರ್ತರೂ ಸೇವಾ ಮನೋಭಾವನೆಯಿಂದ ಸೇವಾ ಕಾರ್ಯಕ್ರಮಗಳನ್ನು ಜೊತೆಯಾಗಿ ನಿಂತು ಮಾಡುತ್ತಿರುವುದು ಅಭಿನಂದನೀಯ ಎಂದರು. ದ.ಕ. ಜಿಲ್ಲೆಯಲ್ಲಿ ಸೋಂಕಿತರ ಜೊತೆ ನಿಂತು ಅವರಿಗೆ ಬೇಕಾಗುವ ಅಗತ್ಯ ವಸ್ತುಗಳನ್ನು ಪೂರೈಸುವ ಕೆಲಸವನ್ನು ಸಂಸದರು, ಸಚಿವರು ಹಾಗೂ ಜಿಲ್ಲೆಯ ಏಳು ಮಂದಿ ಶಾಸಕರು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದಾರೆ ಎಂದು ತಿಳಿಸಿದರು. ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ೫೯ ಗ್ರಾಮಗಳ ಎಲ್ಲಾ ಬೂತ್‌ಗಳಲ್ಲಿ ಸೇವಾ ಕಾರ್ಯಗಳು ನಡೆಯುತ್ತಿದೆ. ಕ್ಷೇತ್ರ ಸಮಿತಿಯ ವತಿಯಿಂದ ಕ್ಷೇಮಾ ನಿಧಿಗೆ ಚಾಲನೇ ನೀಡುವ ಕಾರ್ಯಕ್ರಮವೂ ನಡೆಯಲಿದೆ ಎಂದರು.


ಈ ಸಂದರ್ಭ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ನರಿಕೊಂಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ, ಮಹೇಶ್ ಜೋಗಿ, ಜಿಲ್ಲಾ ಓಬಿಸಿ ಕಾರ್ಯದರ್ಶಿ ಉದಯ ಕುಮಾರ್ ಕಾಂಜಿಲ, ಜಿಲ್ಲಾ ರೈತ ಮೋರ್ಚಾ ಸದಸ್ಯ ಪ್ರೇಮನಾಥ ಶೆಟ್ಟಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ
ಆನಂದ ಶಂಭೂರು, ಉಪಾಧ್ಯಕ್ಷ ಪುರುಷೋತ್ತಮ ಟೈಲರ್, ಪ್ರಧಾನ ಕಾರ್ಯದರ್ಶಿ ಉಮೇಶ್ ಅರಳ , ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಎಸ್ಸಿ ಮೋರ್ಚಾದ ಕೇಶವ ದೈಪಲ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಪಕ್ಷ ಪ್ರಮುಖರಾದ ಯಶೋಧರ ಕರ್ಬೆಟ್ಟು ಮನೋಜ್ ನಿರ್ಮಲ್, ಯುವ ಮೋರ್ಚಾ ಸದಸ್ಯ ರಾಜೇಶ್ ಬೋಳಂತೂರು, ಪಂಚಾಯತಿ ಸದಸ್ಯ ನಾರಾಯಣ ಪೂಜಾರಿ, ಬಿಜೆಪಿ ಕಾರ್ಮಿಕ ಪ್ರಕೋಷ್ಟದ ಸಂಚಾಲಕ ಜಯಪ್ರಕಾಶ್ ನಗ್ರಿ, ಪರಮೇಶ್ವರ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *