Header Ads
Breaking News

ಹೆದ್ದಾರಿ ದರೋಡೆ, ಕೊಲೆ ಸಂಚು ರೂಪಿಸಿದ 8 ಮಂದಿ ಆರೋಪಿಗಳ ಸೆರೆ

 

ಮಂಗಳೂರು ಹಾಗೂ ದ.ಕ ಜಿಲ್ಲೆಯಲ್ಲಿ ಹೆದ್ದಾರಿ ದರೋಡೆ ಮಾಡಲು ಸಂಚು ರೂಪಿಸಿದ್ದ ತೌಸೀರ್ ಬಾಸಿತ್ ತಂಡದ 8 ಮಂದಿ ಆರೋಪಿಗಳನ್ನು ಬಂಧಿಸುವ ಮೂಲಕ ಹಣಕಾಸಿನ ವೈಷಮ್ಯದಲ್ಲಿ ನಡೆಯಬಹುದಾಗಿದ್ದ ಕೊಲೆ ಸಂಚಿನ ಕುಖ್ಯಾತ ದರೋಡೆ ಹಾಗೂ ಕಿಡ್ನಾಪ್ ಗ್ಯಾಂಗ್ ಒಂದನ್ನು ಮಂಗಳೂರು ಪೊಲೀಸರು ಸೆರೆಹಿಡಿದಿದ್ದಾರೆ ಈ ಕುರಿತು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ನೈಟ್ ಕಪ್ರ್ಯೂ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಗಸ್ತು ನಡೆಸುತ್ತಿದ್ದಾಗ ಉಲಾಯಿಬೆಟ್ಟು ಗ್ರಾಮದ ಪರಾರಿ ಎಂಬಲ್ಲಿ ಮಾರಕಾಯುಧಗಳಿಂದ ಕೂಡಿದ್ದ ಇನ್ನೋವಾ ಕಾರಿನಲ್ಲಿ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ವಾಹನಗಳನ್ನು ತಡೆದು ನಿಲ್ಲಿಸಲು ಪ್ರಯತ್ನಿಸುತ್ತಿದ್ದ ತಂಡವನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ವಶಕ್ಕೆ ಪಡೆಯಲಾದ ಆರೋಪಿಗಳನ್ನು ಬಜಾಲ್ ಪಡ್ಪು ನಿವಾಸಿ ತೌಸೀರ್ ಯಾನೆ ಪತ್ತೊಂಜಿ ತೌಸಿರ್ , ಫರಂಗಿಪೇಟೆಯ ಮುಹಮ್ಮದ್ ಅರಾಫತ್ ಯಾನೆ ಅರಫಾ , ಬಂಟ್ವಾಳ ಅಮ್ಮೆಮಾರ್‍ನ ತಸ್ಲಿಂ , ತುಂಬೆ ಹೌಸ್‍ನ ನಾಸಿರ್ ಹುಸೇನ್ , ಪುದು ಗ್ರಾಮದ ಮುಹಮ್ಮದ್ ರಫೀಕ್ , ಮುಹಮ್ಮದ್ ಸಫ್ವಾನ್ , ಮುಹಮ್ಮದ್ ಝೈನುದ್ದೀನ್ , ಉನೈಝ್ ಯಾನೆ ಮುಹಮ್ಮದ್ ಉನೈಝ್ ಎಂದು ಅವರು ಹೇಳಿದರು.

ಆರೋಪಿಗಳಿಂದ ತಲಾ ಎರಡರಂತೆ ತಲವಾರು, ಚೂರಿ, ಒಂದು ಡ್ರಾಗ್ ಚೂರಿ, 8 ಮೊಬೈಲ್ ಪೊನ್‍ಗಳು, 5 ಮಂಕಿ ಕ್ಯಾಪ್, 3 ಮೆಣಸಿನ ಹುಡಿ ಪ್ಯಾಕೆಟ್, ಇನ್ನೋವಾ ಕಾರು ಸೇರಿ ಒಟ್ಟು 10.89 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿದೇಶದಲ್ಲಿರುವ ಬಾತಿಶ್ ಯಾನೆ ಬಾಶಿತ್ ಎಂಬಾತನ ಸೂಚನೆಯಂತೆ ಮಂಗಳೂರಿನ ಹಲವಾರು ವ್ಯಕ್ತಿಗಳ ಹಣಕಾಸಿನ ವ್ಯವಹಾರದ ಸೆಟ್ಲ್‍ಮೆಂಟನ್ನು ತೌಸಿರ್ ಯಾನೆ ತೌಸಿ ಹಾಗೂ ಇತರರು ಮಾಡುತ್ತಿದ್ದರು ಎಂದವರು ಹೇಳಿದರು.

ಇನ್ನು ಗ್ಯಾಂಗ್‍ನ ಇನ್ನಷ್ಟು ಆರೋಪಿಗಳು ಪತ್ತೆಯಾಗಬೇಕಿದ್ದು, ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಹರಿರಾಂ ಶಂಕರ್, ವಿನಯ್ ಗಾಂವ್ಕರ್, ಎಸಿಪಿ ರಂಜಿತ್ ಬಂಡಾರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *