Header Ads
Breaking News

ಹೊರ ರಾಜ್ಯಗಳಿಂದ ಬರುವ ಜನರ ಮೇಲೆ ನಿಗಾ ಇರಿಸಿ : ಸಚಿವ ಬಸವರಾಜ್ ಬೊಮ್ಮಾಯಿ ಆದೇಶ

ಮುಂಬೈ, ಬೆಂಗಳೂರು, ಇತರೆ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಜನರ ಮೇಲೆ ನಿಗಾ ಇರಿಸಿ ಅವರನ್ನು ತಪಾಸಣೆ ಮಾಡುವುದರ ಜೊತೆಗೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಸಜ್ಜಾಗುವಂತೆ ಉಡುಪಿ ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಆದೇಶ ನೀಡಿದರು.
ಬೆಂಗಳೂರಿನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿ ಜಿಲ್ಲಾಡಳಿತದ ಜತೆ ನಡೆಸಿದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಕಳೆದ ಬಾರಿ ಹೊರರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಉಡುಪಿಗೆ ಬಂದಿದ್ದರು. ಹೀಗಾಗಿ ಉಡುಪಿಯ ಸ್ಥಿತಿ ಬಿಗಡಾಯಿಸಿತು. ಈ ಬಾರಿಯೂ ಹಾಗಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬೆಂಗಳೂರು-ಮುಂಬೈ ಮತ್ತು ಇತರ ಕಡೆಗಳಿಂದ ಬರುವ ಜನರನ್ನು ತಪಾಸಣೆ ಮಾಡುವಂತೆ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಆದೇಶ ನೀಡಿದರು.


ಕೋವಿಡ್ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಉಡುಪಿಯಲ್ಲಿ ಇನ್ನಷ್ಟು ಬಿಗಡಾಯಿಸಲಿದೆ. ಆದರೆ ಜಿಲ್ಲಾಡಳಿತ ಇನ್ನೂ ಪೂರ್ವ ತಯಾರಿ ಮಾಡಿಕೊಂಡಂತೆ ಕಾಣಿಸುತ್ತಿಲ್ಲ. ಮುಂದಿನ ನಾಲ್ಕೈದು ದಿನಗಳಲ್ಲಿ ಕಾಮಿಡಿ ನಿಯಂತ್ರಿಸಲು ಸಕಲ ರೀತಿಯಲ್ಲಿ ಸಜ್ಜಾಗಿ ಟೆಸ್ಟಿಂಗ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಮಾಡಿ ಎಂದು ಜಿಲ್ಲಾಡಳಿತಕ್ಕೆ ಸಚಿವ ಬೊಮ್ಮಾಯಿ ತಾಕೀತು ಮಾಡಿದರು.

Related posts

Leave a Reply

Your email address will not be published. Required fields are marked *