Header Ads
Breaking News

3ನೇ ಅಲೆ ಮುಂಜಾಗ್ರತಾ ಕ್ರಮದ ಬಗ್ಗೆ ಸೂಕ್ತ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

KOTA SRINIVAS POOJARY
KOTA SRINIVAS POOJARY

ತಜ್ಞರ ಅಭಿಪ್ರಾಯದಂತೆ ಕೋವಿಡ್ 3 ನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಉಂಟಾಗುವ ಸಾಧ್ಯತೆಗಳಿವೆ. ಇದರ ನಿಯಂತ್ರಣ ಹಾಗೂ ನಿರ್ವಹಣೆಗೆ ಅಗತ್ಯವಿರುವ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ 3 ನೇ ಅಲೆಯ ನಿಯಂತ್ರಣ ಹಾಗೂ ಮಕ್ಕಳ ವಿಶೇಷ ತಜ್ಞ ವೈದ್ಯರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.KOTA SRINIVAS POOJARY

ಒಮ್ಮೆಲೇ ಎಲ್ಲ ಮಕ್ಕಳಿಗೆ ಸೋಂಕು ಹರಡಿದಲ್ಲಿ ಅವರಿಗೆ ಶುಶ್ರೂಷೆ ನೀಡುವುದು ಕಷ್ಟಸಾಧ್ಯ. ಈ ಕಾರಣ ಯಾವುದೇ ರೋಗ ಬಂದು ಚಿಕಿತ್ಸೆ ನೀಡುವ ಬದಲಿಗೆ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಸೋಂಕು ಹರಡದಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ತಜ್ಞರ ಅಭಿಪ್ರಾಯದಂತೆ ಒಂದು ವೇಳೆ ಮಕ್ಕಳು ಹೆಚ್ಚು ಸೋಂಕಿತರಾದಲ್ಲಿ ಅವರಿಗೆ ಅಗತ್ಯವಿರುವ ಚಿಕಿತ್ಸೆಗಳನ್ನು ನೀಡಲು ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಅಗತ್ಯ ಮೂಲಸೌಕರ್ಯಗಳಾದ ಐಸಿಯು ಹಾಸಿಗೆಗಳು, ವೆಂಟಿಲೇಟರ್‍ಗಳು, ಎಚ್‍ಡಿಯು ಹಾಸಿಗೆಗಳನ್ನು ಸಿದ್ಧಪಡಿಸಿಕೊಂಡು, ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ಹೇಳಿದರು.

ಮೂರನೇ ಅಲೆಯ ಚಿಕಿತ್ಸೆಗೆ ತಾಲ್ಲೂಕು ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಟಾಫ್ ನರ್ಸ್‍ಗಳು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಕೋವಿಡ್ ಕಾರ್ಯಪಡೆಗಳು ವ್ಯವಸ್ಥಿತ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ. ಕೆ.ವಿ. ಮಾತನಾಡಿ, ಮುಂದಿನ ದಿನಗಳಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುವ ಮಕ್ಕಳ ಪೆÇೀಷಕರು ಕೋವಿಡ್-19 ನಿಯಮಗಳನ್ನು ತಪ್ಪದೇ ಪಾಲಿಸುವುದರೊಂದಿಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದರು.KOTA SRINIVAS POOJARY

ಮುಂಜಾಗ್ರತಾ ಕ್ರಮವಾಗಿ ಔಷಧಗಳು ಮತ್ತು ವೈದ್ಯಕೀಯ ಪರಿಕರಗಳು ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಿಶೋರ್ ಕುಮಾರ್ ಅಧಿಕಾರಿಗಳು ಭಾಗವಹಿಸಿದ್ದರು.

 

Related posts

Leave a Reply

Your email address will not be published. Required fields are marked *