ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಪ್ರಮುಖ ಪುನಾರಚನೆಯಲ್ಲಿ ಹಲವಾರು ರಾಜ್ಯಗಳ ರಾಜ್ಯಪಾಲರನ್ನು ನೇಮಿಸಲಾಯಿತು.

ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿದ್ದರೆ, ಬಂಡಾರು ದತ್ತಾತ್ರೇಯ ಅವರು ಹರಿಯಾಣದ ಹೊಸ ರಾಜ್ಯಪಾಲರಾಗಿದ್ದಾರೆ. ಹಿಮಾಚಲ ಪ್ರದೇಶದ ಉಸ್ತುವಾರಿ ವಹಿಸಿದ್ದ ದತ್ತಾತ್ರೇಯ ಈಗ ಹರಿಯಾಣದಲ್ಲಿ ಸ್ಥಾನ ವಹಿಸಿಕೊಳ್ಳಲಿದ್ದು, ಹರಿ ಬಾಬು ಕಂಬಂಪತಿ ಅವರನ್ನು ಮಿಜೋರಾಂನ ರಾಜ್ಯಪಾಲರಾಗಿ, ಮಂಗುಭಾಯಿ ಚಗನ್ ಭಾಯ್ ಪಟೇಲ್ ಅವರಿಗೆ ಮಧ್ಯಪ್ರದೇಶ, ರಾಜೇಂದ್ರನ್ ವಿಶ್ವನಾಥ ಅರ್ಲೇಕರ್ ಹಿಮಾಚಲ ಪ್ರದೇಶ, ಪಿಎಸ್ ಶ್ರೀಧರನ್ ಪಿಳ್ಳೈ ಗೋವಾ, ಸತ್ಯದೇವ್ ನಾರಾಯಣ ಆರ್ಯ ತ್ರಿಪುರಾ ಮತ್ತು ರಮೇಶ್ ಬೈಸ್ ಜಾರ್ಖಂಡ್ ಅವರು ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

Related Posts

Leave a Reply

Your email address will not be published.