ಕಾರಿನಡಿ ಬಿದ್ದ ಬಾಲಕ ಪವಾಡಸದೃಶ ಪಾರು
ಉಳ್ಳಾಲ : ಕಾರಿನಡಿಗೆ ಬಿದ್ದ ಬಾಲಕನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ಬಂಟ್ವಾಳದ ಇರಾ ಬಳಿ ನಡೆದಿದೆ. ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿವಾನಂದ್ ಎಂಬವರ ಪುತ್ರ ಮನೋಜ್ (12) ಗಾಯಾಳು ಬಾಲಕ. ಆಟವಾಡಲೆಂದು ಮನೆಯಿಂದ ಹೊರ ಓಡಿಬಂದ ಬಾಲಕ ರಸ್ತೆ ದಾಟುವಾಗ ಕಾರು ಆತನ ಮೇಲೆ ಹರಿದಿದೆ. ಕಾರಿನಡಿಗೆ ಬಾಲಕ ಬಿದ್ದು ಎಡಕಾಲು ಮುರಿತಕ್ಕೊಳಗಾಗಿದ್ದು, ಪ್ರಾಣಾಪಾಯದಿಂದ ಪವಾಡಸದೃಶವಾಗಿ ಪಾರಾಗಿದ್ದಾರೆ