ಕಾರ್ಕಳದ ಬಸ್ ನಿಲ್ದಾಣದ ಪರಿಸರದಲ್ಲಿ ಸಂಭ್ರಮದಿಂದ ಗಣೇಶೋತ್ಸವ ಆಚರಣೆ
ಕಾರ್ಕಳ: ಇಂದು ಶುಕ್ರವಾರ, ಎಲ್ಲೆಡೆ ಗಣೇಶ ಚತುರ್ಥಿ ಹಬ್ಬದ ಸಂಭ್ರಮ. ಆದರೆ ಕೋವಿಡ್ ಕಾರಣದಿಂದ ಹಿಂದಿನ ಸಡಗರ ಇಲ್ಲದೆ ಜನರು ಹಾಗೂ ಸಂಘಟಕರು ಅತಿ ಜಾಗರೂಕತೆಯಿಂದ ಹಬ್ಬವನ್ನು ಸರಕಾರ ಮತ್ತು ಜಿಲ್ಲಾಡಳಿತದ ಆದೇಶದಂತೆ ಆಚರಿಸುವುದು ಕಂಡುಬಂತು.
ಈ ಸಂದರ್ಭದಲ್ಲಿ ೧೪ ವರ್ಷದಿಂದ ಆಚರಿಸಿಕೊಂಡು ಬರುತ್ತಿರುವ ಕಾರ್ಕಳ ಬಸ್ ನಿಲ್ದಾಣ ಪರಿಸರದಲ್ಲಿ ಎಲ್ಲ ಜಾತಿಯ ಹಾಗೂ ಎಲ್ಲ ಧರ್ಮದವರನ್ನು ಸೇರಿಸಿಕೊಂಡು ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಇದರಲ್ಲಿ ಸಂಗ್ರಹವಾಗುವ ಹಣವನ್ನು ಕಷ್ಟದಲ್ಲಿರುವ ವ್ಯಕ್ತಿಗಳಿಗೆ ಹಾಗೂ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗ ಹಂಚುತ್ತೇವೆ ಎಂದು ಗಣೇಶೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ಸಮಿತಿ ಸ್ಥಾಪಕಾಧ್ಯಕ್ಷ ಶುಭೋದ್ ಆಳ್ವ ಹೇಳಿದರು.