ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ವರ್ಷದ ಶೈಕ್ಷಣಿಕ ಚಟುವಟಿಕೆಯ ಕುರಿತ ವಿಶೇಷ ಸಭೆ
ಕಾರ್ಕಳ ತಾಲೂಕು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ವರ್ಷದ ಶೈಕ್ಷಣಿಕ ಚಟುವಟಿಕೆಯ ಕುರಿತ ವಿಶೇಷ ಸಭೆಯ ನಡೆಯಿತು. ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನ ಉಡುಪಿ ಇದರ ವಿದ್ಯಾಂಗ ಉಪನಿರ್ದೇಶಕರಾದ ಎನ್ ಎಚ್ ನಾಗೂರರವರು ವಹಿಸಿದ್ರು. ಇದೇ ವೇಳೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಕಾರ್ಕಳ ಶಿಕ್ಷಣ ವಲಯವೂ ಪ್ರತಿ ವಿಭಾಗದಲ್ಲೂ ಉತ್ತಮ ಸಾಧನೆ ಮಾಡುತ್ತಿದೆ.ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿ ಕಾರ್ಕಳ ಶಿಕ್ಷಣ ಇಲಾಖೆಯ ಮಾಡುತ್ತಿದೆ ಎಂದು ತಿಳಿಸಿದರು.ಉಡುಪಿ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಉಪಪ್ರಾಂಶುಪಾಲರಾದ ಡಾ|ಅಶೋಕ ಕಾಮತ್ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಇವರನ್ನು ಇತ್ತೀಚೆಗೆ ಹಂಪಿ ವಿಶ್ವ ವಿದ್ಯಾಲಯ ನೀಡಿದ ಡಾಕ್ಟರೇಟ್ ಪದವಿ ಪಡೆದ ಸಾಧನೆಗೆ ತಾಲೂಕು ಮುಖ್ಯೋಪಾಧ್ಯಾಯರ ಸಂಘದಿಂದ ವತಿಯಿಂದ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ತಾಲೂಕು ಅಕ್ಷರ ದಾಸೋಹ ನಿರ್ದೇಶಕರಾದ ಭಾಸ್ಕರ್ ಟಿ , ಕಾರ್ಕಳ ಶಿಕ್ಷಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಜಿ ನಾಯಕ್ , ಎಂ ವಿ ಶಾಸ್ತ್ರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಕಾಶ್ ರಾವ್ ಇನ್ನಾ , ವೃಂದಾ ಶೆಣೈ, ಭುವನೇಂದ್ರ ಪ್ರೌಢ ಶಾಲಾ ಶಿಕ್ಷಕಿ ಪೂರ್ಣಿಮಾ ಶೆಣೈ ,ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಮುಖ್ಯೋಪಾಧ್ಯಾಯರಾದ ದಿವಾಕರ ಮುಖ್ಯೋಪಾಧ್ಯಾಯರ ಸಂಘದ ಪದಾಧಿಕಾರಿಗಳು ತಾಲೂಕಿನ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢ ಶಾಲಾ ಮುಖ್ರೋಪಾಧ್ಯಾಯರು ಉಪಸ್ಥಿತರಿದ್ದರು.