ಕಾರ್ಮಿಕರಿಗೆ ನೀಡಲಾದ ಆಹಾರ ಕಿಟ್ ವಿತರಣೆಯಲ್ಲಿ ಅವ್ಯವಹಾರ- ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಸಿಐಟಿಯು ಪ್ರತಿಭಟನೆ
ಉಡುಪಿ: ಕಾರ್ಮಿಕರ ಹೆಸರಲ್ಲಿ ನೀಡಲಾದ ಆಹಾರ ಕಿಟ್ ಅವ್ಯವಹಾರ ತನಿಖೆಗೆ ಅಗ್ರಹಿಸಿ ಹಾಗೂ ತೈಲ ಬೆಲೆ ಏರಿಕೆ ವಿರೋಧಿಸಿ ಉಡುಪಿಯಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆ ಪ್ರತಿಭಟನೆ ನಡೆಸಿದರು.
ಕೊವಿಡ್ ಸಂಕಷ್ಟ ಕಾಲದಲ್ಲಿ ಕಾರ್ಮಿಕರ ಹೆಸರಲ್ಲಿ ಬಿಡುಗಡೆಗೊಂಡ ಆಹಾರ ಕಿಟ್ ಖರೀದಿಯಲ್ಲಿ ಭಾರೀ ನಡೆದಿರುವ ಅವ್ಯಹಾರ ತನಿಖೆ ನಡೆಸುವ ಜೊತೆಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಉಡುಪಿ ತಾಲೂಕು ಕಚೇರಿ ಎದುರುಗಡೆ ಸಿಐಟಿಯು ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಡುಗೆ ಅನಿಲ, ತೈಲ ಬೆಲೆ ಏರಿಕೆಯಿಂದ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ಕಾಣುತ್ತಿದೆ. ಇದು ಜನಸಮಾನ್ಯರ ಹೊಟ್ಟೆ ಮೇಲೆ ಬರೆ ಎಳೆದಂತಾಗಿದೆ. ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಸರಕಾರ ಎಸ್ಮಾ ಜಾರಿ ಮಾಡಿರುವುದನ್ನು ರದ್ದುಗೊಳಿಸಬೇಕೆಂದು ಪ್ರತಿಭಟನಾಕಾರರು ಅಗ್ರಹಿಸಿದರು.
ಬಡ ಕಾರ್ಮಿಕರಿಗೆ ನೀಡಲಾದ ಆಹಾರ ಕಿಟ್ ವ್ಯವಹಾರದಲ್ಲಿ ಭಾರೀ ಅಕ್ರಮಗಳು ನಡೆದಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಸಂಘಟಿತ ಹಾಗೂ ವಲಸೆ ಕಾರ್ಮಿಕರಿಗೆ ಅರ್ಥಿಕ ನೆರವು, ಆಹಾರ ಕಿಟ್ ಜೊತೆಗೆ ಉಚಿತ ಲಸಿಕೆ ನೀಡುವಂತೆ ಪ್ರತಿಭಟನಕಾರರು ಒತ್ತಾಯಿಸಿದರು.