ಕುಂಟಿಕಾನದಲ್ಲಿ ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ : ಸ್ಕೂಟರ್ ಸವಾರನಿಗೆ ಗಾಯ
ಮಂಗಳೂರಿನ ಕುಂಟಿಕಾನದ ಎಜೆ ಆಸ್ಪತ್ರೆಯ ಮುಂಭಾಗದಲ್ಲಿ ಖಾಸಗಿ ಬಸ್ನ ಹಿಂಬದಿಗೆ ಸ್ಕೂಟರ್ ವಾಹನ ಢಿಕ್ಕಿಯಾಗಿದ್ದು, ಸ್ಕೂಟರ್ ಸವಾರ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಖಾಸಗಿ ಬಸ್ನ ಹಿಂಬದಿಗೆ ದ್ವಿಚಕ್ರ ವಾಹನ ಸವಾರ ಹಿಮ್ಮುಖವಾಗಿ ಢಿಕ್ಕಿಯಾಗಿದೆ. ಢಿಕ್ಕಿಯಾದ ರಭಸಕ್ಕೆ ದ್ವಿಚಕ್ರವಾಹನ ಸವಾರ ಬಸ್ನ ಅಡಿಗೆ ನುಗ್ಗಿದ್ದು, ಗಂಭೀರ ಗಾಯಗೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.