ಕುಕ್ಕೆ ಸುಬ್ರಹ್ಮಣ್ಯ: ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸೋಮವಾರ ಸಾಯಂಕಾಲ ಬೇಟಿ ನೀಡಿದರು.ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಗೃಹ ಸಚಿವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ದೇವಳದ ಹೊರಾಂಗಣದಲ್ಲಿ ನಡೆದ ಉತ್ಸವದಲ್ಲಿ ಪಾಲ್ಗೊಂಡರು. ಕಾರ್ಯನಿರ್ವಹಣಾ ಅಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಪುಷ್ಪಲತಾ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಶ್ರೀವತ್ಸ, ಪ್ರಸನ್ನ ದರ್ಬೆ, ಪಿ.ಜಿ.ಎಸ್.ಎನ್. ಪ್ರಸಾದ್, ಶೋಭಾ ಗಿರಿಧರ್, ವನಜಾ ವಿ.ಭಟ್, ಮಾಸ್ಟರ್ ಪ್ಲಾನ್ ಸದಸ್ಯ ಮನೋಜ್, ಪ್ರಮುಖರಾದ ಶ್ರೀಕುಮಾರ್ ಬಿಲದ್ವಾರ, ದಿನೇಶ್ ಸಂಪ್ಯಾಡಿ, ವೆಂಕಟ್ ವಲಲಂಬೆ, ಪ್ರಸಾದ್ ಕೆ.ರೈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಕರ್ನಾಟಕ ರಾಜ್ಯ ಸರ್ಕಾರದ ಗೃಹ ಸಚಿವ ಅರಗ ಜ್ಞಾನೇಂದ್ರ ನ.8 ರಂದು ಸಂಜೆ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಪೀಠಾಧಿಪತಿ ವಿದ್ಯಾಪ್ರಸನ್ನ ಶ್ರೀಗಳನ್ನು ಭೇಟಿಯಾಗಿ ಆರ್ಶೀವಾದ ಪಡೆದರು. ಈ ಸಂದರ್ಭ ಸ್ವಾಮೀಜಿಯವರು ಗೃಹ ಸಚಿವರನ್ನು ಶಾಲು ಹೊದಿಸಿ ಗೌರವಿಸಿದರು.

Related Posts

Leave a Reply

Your email address will not be published.