ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನದ ಕಾರ್ಯಕ್ರಮ
ಅಖಿಲ ಭಾರತ ಬಿಲ್ಲವರ ಯೂನಿಯನ್, ಬಿಲ್ಲವ ಮಹಿಳಾ ಸಂಘ ಮತ್ತು ನಾರಾಯಣಗುರು ವಿದ್ಯಾ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನದ ಕಾರ್ಯಕ್ರಮವನ್ನು ನಗರದ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಆಚರಿಸಲಾಯ್ತು.
ಈ ವೇಳೆ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ನವೀನ್ ಚಂದ್ರ ಡಿ.ಸುವರ್ಣ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಕುದ್ರೊಳಿ ನಾರಾಯಣ ಗುರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ|ವಸಂತ್ ಕುಮಾರ್, ಪಿಯು ಕಾಲೇಜಿನ ಪ್ರಾಂಶುಪಾಲರಾದ ರೇಣುಕಾ ಅರುಣ್, ಮುಖ್ಯೋಪಾಧ್ಯಾಯಿನಿ ಕುಸುಮಾ ಪುರುಷೋತ್ತಮ, ಕುದ್ರೋಳಿ ಕ್ಷೇತ್ರದ ಆರ್ಚಕರಾದ ನವೀನ್ ಭಟ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ಬಿಲ್ಲವ ಮಹಿಳಾ ಸಂಘದ ಪದಾಧಿಕಾರಿ ಹಾಗೂ ಸದಸ್ಯರು, ನಾರಾಯಣ ಗುರು ವಿದ್ಯಾಸಂಸ್ಥೆ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.