ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಸೆ.27ರಂದು ಭಾರತ್ ಬಂದ್‍ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ಬಂಟ್ವಾಳದ ಬಿ.ಸಿ. ರೋಡ್‍ನ ಮಿನಿ ವಿಧಾನಸೌಧದರಿಂದ ಕಾಲ್ನಡಿಗೆಯಲ್ಲಿ ಹೊರಟು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಹೇಳಿದರು.ಅವರು ಮಂಗಳೂರಿ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕೃಷಿ ಉತ್ಪನ್ನಗಳಿಗೆ ಬೆಂಬಲಬೆಲೆಯನ್ನು ಕಾನೂನಾತ್ಮಕಗೊಳಿಸಲು ಮತ್ತು ಕಾರ್ಮಿಕ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿದ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.ಆನಂತರ ರಾಜ್ಯ ಉಪಾಧ್ಯಕ್ಷರಾದ ಕೆ. ಯಾದವ ಶೆಟ್ಟಿ ಅವರು ಮಾತನಾಡಿ, ದೆಹಲಿಯಲ್ಲಿ ದೇಶದ ಮೂಲೆ ಮೂಲೆಗಳಿಂದ ಬಂದ ರೈತರು ಕಳೆದ 10 ತಿಂಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಅವರ ಚಳುವಳಿಗೆ ಯಾವುದೇ ರೀತಿಯ ಸ್ಪಂದನೆ ನೀಡಿಲ್ಲ. ಇದರ ವಿರುದ್ಧ ಭಾರತ್ ಬಂದ್ ಹಮ್ಮಿಕೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.ಸುದ್ದಿಗೋಷ್ಟಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷರಾದ ಜೆ. ಬಾಲಕೃಷ್ಣ ಶೆಟ್ಟಿ, ರಾಜ್ಯ ರೈತ ಸಂಘದ್ ಜಿಲ್ಲಾಧ್ಯಕ್ಷರಾದ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್, ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ ಸಾಲ್ಯಾನ್ ಉಪಸ್ಥಿತರಿದ್ದರು.