ಕೇಂದ್ರದ ಸರ್ಕಾರದ ಖಾಸಗೀಕರಣ ಯೋಜನೆ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರದ ಎನ್‌ಎಂಪಿ ಯೋಜನೆಯ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಂಗಳೂರು ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮೋದಿ ನೇತೃತ್ವದ ಸರಕಾರವು ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಲೇ ಇದೆ. ಇದರ ವಿರುದ್ಧ ಯುವ ಜನತೆ ಸೆಟೆದು ನಿಲ್ಲಬೇಕಿದೆ. ಯುವ ಕಾಂಗ್ರೆಸ್ ಈ ನಿಟ್ಟಿನಲ್ಲಿ ಹೋರಾಟ ಮುಂದುವರಿಸಲಿದೆ ಎಂದರು. ಪ್ರತಿಭಟನೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ರಮಾನಂದ ಪೂಜಾರಿ, ಆಶಿತ್ ಡಿ. ಪಿರೇರ, ದೀಕ್ಷಿತ್ ಅತ್ತಾವರ, ನಝೀರ್ ಬಜಾಲ್ ಮತ್ತಿತರರು ಪಾಲ್ಗೊಂಡಿದ್ದರು.ಬಳಿಕ ರೈಲು ನಿಲ್ದಾಣಕ್ಜೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು.