ಕೇರಳ ಮುಖ್ಯಮಂತ್ರಿಯಿಂದ ಹಲ್ಲೆಗೆ ಸಂಚು:ರಾಜ್ಯಪಾಲ ಆರಿಫ್ ಮೊಹಮದ್ ಖಾನ್
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನನ್ನ ಮೇಲೆ ಹಲ್ಲೆಗೆ ಸಂಚು ನಡೆಸಿದ್ದಾರೆ ಎಂದು ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮದ್ ಖಾನ್ ಆರೋಪ ಮಾಡಿದ್ದಾರೆ. ದಿಲ್ಲಿಗೆ ಹೊರಟಿದ್ದ ರಾಜ್ಯಪಾಲರನ್ನು ವಿಮಾನ ನಿಲ್ದಾಣದ ಬಳಿ ತಡೆದ ಸಿಪಿಎಂ ಪಕ್ಷದ ವಿದ್ಯಾರ್ಥಿ ಘಟಕವಾದ ಎಸ್‍ಎಫ್‍ಐನವರು ರಾಜ್ಯಪಾಲರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.
ಕೂಡಲೆ ರಾಜ್ಯಪಾಲ ಆರಿಫ್ ಖಾನ್ ಅವರು ಸ್ಥಳಕ್ಕೆ ಬಂದ ಮಾಧ್ಯಮದವರಿಗೆ ನೀಡಿದ ಮಾಹಿತಿ ಇದು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನನ್ನ ಮೇಲೆ ಹಲ್ಲೆಗೆ ಸಂಚು ನಡೆಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಎಸ್‍ಎಫ್‍ಐನವರು ರಾಜ್ಯಪಾಲರ ವಾಹನ ತಡೆದು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಆ ಸಂಬಂಧ ಏಳು ಜನರನ್ನು ಬಂಧಿಸಲಾಗಿದೆ. ಹಲ್ಲೆ ನಡೆದಿದೆ ಎನ್ನುವುದು ಕಲ್ಪನೆ ಎಂದು ಕೇರಳದ ಸಿಪಿಎಂ ಸರಕಾರದ ಪರ ಹೇಳಿಕೆ ನೀಡಲಾಗಿದೆ.