ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಕ್ಷಿತಾ ಪ್ರೇಮ್
ಉಳ್ಳಾಲ: ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಅವರು ಕುತ್ತಾರು ಕೊರಗಜ್ಜ ಕಟ್ಟೆಗೆ ಮಂಗಳವಾರ ಭೇಟಿ ನೀಡಿದರು. ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಕೊರಗಜ್ಜನ ಬಳಿ ಹರಕೆ ಹೊತ್ತ ಹಿನ್ನೆಲೆಯಲ್ಲಿ ಭೇಟಿ ನೀಡಿ ಹರಕೆ ಸಲ್ಲಿಸಿದ್ದಾರೆ.
ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾಗಿರುವ ನಟಿ ರಕ್ಷಿತಾ ಪ್ರೇಮ್, ಸದ್ಯ ಝೀ ಕನ್ನಡ ವಾಹಿನಿ ರಿಯಾಲಿಟಿ ಷೋನಲ್ಲಿ ಜಡ್ಜ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ರಕ್ಷಿತಾ ಅದರಲ್ಲಿ ಯಶಸ್ಸು ಕಂಡಿದ್ದರು. ಈ ಬಗ್ಗೆ ಮಂಗಳೂರಿನಲ್ಲಿರುವ ಕಲಾವಿದರಲ್ಲಿ ಹರಕೆ ಹೊತ್ತ ಕುರಿತು ತಿಳಿಸಿದ್ದು, ಅದರಂತೆ ಇಂದು ಎಲ್ಲರೂ ನಟಿ ರಕ್ಷಿತಾ ಜತೆಗೆ ಕೊರಗಜ್ಜ ಕಟ್ಟೆಗೆ ಭೇಟಿ ನೀಡಿದರು.
ಈ ವೇಳೆ ನಾಟಕ ಕಲಾವಿದ ಕಿಶೋರ್ ಡಿ.ಕೆ, ಕಾಮಿಡಿ ಕಿಲಾಡಿಯ ಕಲಾವಿದರಾದ ಧೀರಜ್ ನೀರುಮಾರ್ಗ, ಸೂರಜ್ ಪಾಂಡೇಶ್ವರ, ಬೆಂಗಳೂರಿನ ಖ್ಯಾತ ಕೊರಿಯೋಗ್ರಾಫರ್ ರಾಹುಲ್ ಮತ್ತು ಪ್ರಜ್ವಲ್ ಮೊದಲಾದವರು ಜೊತೆಗಿದ್ದರು.