ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ದರ್ಶನ ಪಡೆದ ಸಚಿವ ಅರಗ ಜ್ಞಾನೇಂದ್ರ
ಕುಂದಾಪುರ : ರಾಜ್ಯ ಗ್ರಹ ಸಚಿವ ಅರಗ ಜ್ಞಾನೇಂದ್ರ ಅವರು ಮಂಗಳವಾರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ಪ್ರಫುಲ್ಲಾ ಹಾಗೂ ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ದೇವಿಗೆ ಚಂಡಿಕಾ ಹೋಮ ಸಹಿತ ವಿಶೇಷ ಪೂಜೆ ಸಲ್ಲಿಸಿದರು.ಸಚಿವ ಅರಗ ಜ್ಞಾನೇಂದ್ರ ಅವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಕಾರ್ಯನಿರ್ವಹಣಾಧಿಕಾರಿ ಪಿ. ಬಿ. ಮಹೇಶ್ ಇದ್ದರು.