ಕೋವಿಡ್ ಲಸಿಕೆ ವ್ಯಾಪರೀಕರಣದ ವಸ್ತುವಾಗಬಾರದು: ಐವನ್ ಡಿಸೋಜ
ಕೋವಿಡ್ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕು. ಲಸಿಕೆ ವ್ಯಾಪರೀಕರಣದ ವಸ್ತುವಾಗಬಾರದು. ಸರ್ಕಾರವೇ ಲಸಿಕೆಯನ್ನು ಭರಿಸಿ ಉಚಿತವಾಗಿ ಎಲ್ಲರಿಗೂ ಉಚಿತವಾಗಿ ನೀಡಬೇಕು ಎಂದು ಮಾಜಿ ಎಂಎಲ್ಸಿ ಐವನ್ ಡಿಸೋಜಾ ಆಗ್ರಹಿಸಿದರು.ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ದೇಶದ 130 ಕೋಟಿ ಜನರಿಗೆ ಉಚಿತ ಲಸಿಕೆಯನ್ನು ನೀಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಅದಕ್ಕಾಗಿಯೇ 35,000 ಕೋಟಿ ರೂಪಾಯಿ ತೆರಿಗೆಯ ಹಣವನ್ನು ತೆಗೆದಿಟ್ಟ ಮೇಲೂ ಲಸಿಕೆ ವಿಚಾರದಲ್ಲಿ ವ್ಯಾಪಾರೀಕರಣ ಮಾಡುತ್ತಿದ್ದೀರಿ ಎಂದು ಆರೋಪಿಸಿದರು.ಇನ್ನು ದಕ್ಷಿಣ ಕನ್ನಡ ಜಿಲ್ಲೆಯನ್ನು ಅನ್ಲಾಕ್ ಮಾಡಲು ಪ್ರಥಮ ಪ್ರಾಶಸ್ತ್ಯ ನೀಡಬೇಕಿತ್ತು. ಇದಕ್ಕೆ ನಮ್ಮ ಜಿಲ್ಲೆಯ ಅಧಿಕಾರಿಗಳ ಮತ್ತು ಚುನಾವಣಾ ಪ್ರತಿನಿಧಿಗಳ ವೈಫಲ್ಯವೇ ಕಾರಣ ಎಂದು ಹೇಳಿದರು.
ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಹಮ್ಮದ್, ಶಶಿಧರ್ ಹೆಗ್ಡೆ, ಗಣೇಶ್ ಪೂಜಾರಿ, ವಿವೇಕ್ ರಾಜ್, ಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.