ಕೋವಿಡ್ ಹಿನ್ನಲೆ: ತಲಪಾಡಿ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ
ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್ಪೋಸ್ಟ್ ಸೇರಿದಂತೆ 7 ಕಡೆಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ರು.
ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಗಡಿಯ ಚೆಕ್ ಪೋಸ್ಟ್ನಲ್ಲಿಯೇ ಮಾಡಲು ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಜಿಲ್ಲಾಡಳಿತ ಸೂಚನೆ ಕೂಡ ಕೊಟ್ಟಿದೆ. ಹೀಗಾಗಿ ಕೋವಿಡ್ ಮುಂಜಾಗೃತ ಕ್ರಮವನ್ನು ವಹಿಸಿಕೊಳ್ಳಬೇಕೆಂದು ಅವರು ಹೇಳಿದ್ರು.