ಕೋವಿಡ್ ಹಿನ್ನೆಲೆ ಗಡಿ ಜಿಲ್ಲೆಯಲ್ಲಿ ಜಾಗ್ರತೆ ವಹಿಸಬೇಕು : ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿ ಪ್ರದೇಶದ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಇಂದು ಮಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗಡಿ ಜಿಲ್ಲೆಯಲ್ಲಿಜಾಗ್ರತೆವಹಿಸಬೇಕು, ಪಕ್ಕದ ರಾಜ್ಯದವರಿಗೆ ಟೆಸ್ಟ್ ಮಾಡಬೇಕು, ಈಗಾಗಲೇ ಎಲ್ಲಾ ಗಡಿ ಜಿಲ್ಲೆಗಳಿಗೆ ನಾನು ಭೇಟಿ ಕೊಡ್ತಾ ಇದ್ದೇನೆ, ಮೈಸೂರು ಮುಗಿಸಿ ದ.ಕ ಮತ್ತು ಉಡುಪಿ ಜಿಲ್ಲೆ ಪ್ರವಾಸ ಕೈಗೊಂಡಿದ್ದೇನೆ
ಕೇರಳ ಮತ್ತು ಮಹಾರಾಷ್ಟ್ರದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ಕೊಡ್ತೇನೆ. ರಾಜ್ಯದ ಎಲ್ಲಾ ಕಡೆಗಳಲ್ಲೂ ವೆಂಟಿಲೇಟರ್, ಆಕ್ಸಿಜನ್ ಬೆಡ್ ಗಳನ್ನ ಹೆಚ್ಚಿಸಲಾಗ್ತಿದೆ. ಎಂಥಾ ಪರಿಸ್ಥಿತಿ ಬಂದರೂ ಸನ್ನದ್ದರಾಗಿರಲು ನಾವು ರೆಡಿಯಾಗಿದ್ದೇವೆ. ಮಕ್ಕಳಿಗೆ ಸೋಂಕು ತಗುಲುತ್ತಿರುವ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗಿದೆ. ಮಕ್ಕಳ ಇಮ್ಯುನಿಟಿ ಪವರ್ ಹೆಚ್ಚಿಸೋ ಸಲುವಾಗಿ ಪೌಷ್ಠಿಕ ಆಹಾರ ನೀಡಲು ಸೂಚಿಸಲಾಗಿದೆ. ಜಿಲ್ಲೆ ಮತ್ತು ತಾಲೂಕುಗಳಲ್ಲಿ ಮಕ್ಕಳ ಕೋವಿಡ್ ಟೆಸ್ಟ್ ಗೆ ಒಳಪಡಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳ ಐಸಿಯು ಮತ್ತು ಬೆಡ್ ಗಳು ತಯಾರಾಗಿವೆ ಎಂದು ಹೇಳಿದರು.