ಕೋವಿಡ್ ಹಿನ್ನೆಲೆ ತಲಪಾಡಿ ಗಡಿಭಾಗದಲ್ಲಿ ತೀವ್ರಗೊಂಡ ತಪಾಸಣೆ
ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ ಕ್ರಮ ಕೊಂಡಿದ್ದಾರೆ.
ಮಂಗಳೂರು ಕಮಿಷನರೇಟ್ ಒಳಪಡುವ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ, ನೆತ್ತಿಲಪದವು, ನಾರ್ಯ, ನಂದರಪಡ್ಪು, ಮುದುಂಗಾರುಕಟ್ಟೆ, ತೌಡುಗೋಳಿ ಪ್ರದೇಶದಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಗಡಿ ಪ್ರದೇಶದಲ್ಲಿ ಓರ್ವ ಎಎಸ್ಐ ನೇತೃತ್ವದಲ್ಲಿ ಪೊಲೀಸ್ ತಪಾಸಣೆ ನಡೆಯುತ್ತಿದ್ದು, ತಲಪಾಡಿ ಗಡಿಯ್ಲಲಿ ಆರೋಗ್ಯ ಇಲಾಖೆ ಸೇರಿದಂತೆ ವೈದ್ಯಕೀಯ ಕಾಲೇಜುಗಳ ಮೆಡಿಕಲ್ ಮತ್ತು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆಯ ನಿಟ್ಟಿನಲ್ಲಿ ಕೈಜೋಡಿಸಿದ್ದಾರೆ. ಕೇರಳದಿಂದ ತಲಪಾಡಿ ಮಾರ್ಗವಾಗಿ ಬರುವ ಬಸ್ನ ಎಲ್ಲಾ ಪ್ರಯಾಣಿಕರನ್ನು ಇಳಿಸಿ ತಪಾಸಣ ನಡೆಸಿದ ಬಳಿಕವೇ ಮಂಗಳೂರಿಗೆ ಕಳುಹಿಸಲಾಗುತ್ತಿದೆ.