ಖಾಸಗಿ ವೈಟ್ ಬೋರ್ಡ್ ವಾಹನಗಳ ಮೇಲೆ ಕ್ರಮಕ್ಕೆ ಆಗ್ರಹ
ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ ವೈಟ್ ಬೋರ್ಡ್ ವಾಹನಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಗೌರವ ಅಧ್ಯಕ್ಷ ಸುನೀಲ್ ಕುಮಾರ್ ಬಜಾಲ್ , ಪೊಲೀಸ್ ಇಲಾಖೆ ಹಾಗೂ ಆರ್ ಟಿ ಓ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು, ಇಲ್ಲದ್ರೆ ಆರ್ ಟಿಓ ಕಚೇರಿ ಮುತ್ತಿಗೆ ಹಾಕುವ ಅನಿವಾರ್ಯ ಬರುತ್ತೆ ಎಂದು ಎಚ್ಚರಿಕೆ ನೀಡಿದ್ರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಅನಂದ್ ಕೆ, ರೆಹಮ್ಮಾನ್ ಖಾನ್ ಕುಂಜತ್ತ್ ಬೈಲ್, ಶಾಲಾ ವಾಹನ ಅಧ್ಯಕ್ಷ ಮೋಹನ್ ಕುಮಾರ್, ಕಮಲಾಕ್ಷ, ಲೋಕೇಶ್ ಕಶ್ಯಕೋಡಿ ಮತ್ತಿತರರು ಉಪಸ್ಥಿತರಿದ್ದರು.