ಗಾಂಜಾ ಸಹಿತ ಆರೋಪಿ ವಶಕ್ಕೆ: ಕೆಜಿ ಗೂ ಅಧಿಕ ಪ್ರಮಾಣದ ಗಾಂಜಾ ವಶ
ಕುಂದಾಪುರ: ಅಕ್ರಮವಾಗಿ ಗಾಂಜಾ ಹೊಂದಿದ್ದ ವ್ಯಕ್ತಿಯೋರ್ವನನ್ನು ಕುಂದಾಪುರ ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕಾರವಾರ ಬಿಣಗಾ ನಿವಾಸಿ ಜಾಫರ್ ಗುಡುಮಿಯಾ (28) ಬಂಧಿತ ಆರೋಪಿ. ಆರೋಪಿಯಿಂದ ಸುಮಾರು 4೦,೦೦೦ ರೂ ಮೌಲ್ಯದ ೧ಕೆಜಿ 810 ಗ್ರಾಂ ತೂಕದ ಗಾಂಜಾ, 1೦,೦೦೦ ಮೌಲ್ಯದ 1ಗ್ರಾಂ ತೂಕದ ಬ್ರೌನ್ ಶುಗರ್, 2 ಮೊಬೈಲ್ 1,5೦೦ ರೂ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಅವರು ಸಿಬ್ಬಂದಿಗಳೊಂದಿಗೆ ಗುರುವಾರ ರಾತ್ರಿ ಪಾಳಯದಲ್ಲಿ ಕರ್ತವ್ಯದಲ್ಲಿದ್ದಾಗ ನಗರದ ಶಾಸ್ತ್ರೀ ವೃತ್ತದ ಬಳಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಆರೋಪಿ ಜಾಫರ್ನನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ. ಸದ್ಯ ಪ್ರಕರಣವನ್ನು ಕುಂದಾಪುರ ನಗರ ಠಾಣೆಗೆ ಹಸ್ತಾಂತರಿಸಲಾಗಿದೆ.
ಕ್ರೈಂ ವಿಭಾಗದ ಸಿಬ್ಬಂದಿಗಳಾದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ವಿಜಯ್ ಕುಮಾರ್, ರಮೇಶ್ ಕುಲಾಲ್, ಕುಂದಾಪುರ ಪೊಲೀಸ್ ಠಾಣೆಯ ರಾಘವೇಂದ್ರ ಮೊಗವೀರ, ವಿಜೇತ್ ಮತ್ತು ಜೀಪು ಚಾಲಕ ರಾಜು ಕಾರ್ಯಾಚರಣೆಯಲ್ಲಿದ್ದರು.