ಗುರುಪುರ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಶಾಸಕ ಡಾ. ವೈ ಭರತ್ ಶೆಟ್ಟಿ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಶಾಸಕ ಭರತ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಪ್ರಮುಖರಾದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ, ಹಾಗೂ ಹಾಲಿ ಪಂಚಾಯತ್ ಸದಸ್ಯರಾದ ಸಚಿನ್ ಅಡಪ್ಪ ,ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹಾಲಿ ಪಂಚಾಯತ್ ಸದಸ್ಯರಾದ ಉದಯ ಭಟ್, ಮಾಜಿ ಸದಸ್ಯರಾದ ಲೋಲಾಕ್ಷ, ಇನ್ನಿತರರ ಪ್ರಮುಖರಾದ ರುಕ್ಕಯ್ಯ , ಸಂತೋಷ್, , ಯಶವಂತ್, ಧೀರಜ್, ಗಣೇಶ್ ಕೊಟ್ಟಾರಿ,ಕಮಲಾಕ್ಷ, ರಾಜೇಶ್, ಗಂಗಾಧರ್, ಅಭಿಷೇಕ್ ಸಹಿತ ಅನೇಕರು ಭಾಜಪಕ್ಕೆ ಸೇರ್ಪಡೆಗೊಂಡರು. ಇವರ ಸೇರ್ಪಡೆಯಿಂದ ಆ ಭಾಗದಲ್ಲಿ ಪಕ್ಷ ಮತ್ತಷ್ಟು ಬಲಿಷ್ಟವಾಗಲಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸುದರ್ಶನ ಮೂಡುಬಿದಿರೆ, ಭಾಜಪಾ ಉತ್ತರ ಮಂಡಲ ಅಧ್ಯಕ್ಷರಾದ
ತಿಲಕರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.