ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ಸರಳವಾಗಿ ಗಾಂಧಿ ಜಯಂತಿ ಆಚರಣೆ
ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ನಗರದ ಗಾಂಧಿ ಪಾಕ್೯ನಲ್ಲಿ ಅ.2 ರ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗಾಂಧಿ ಪ್ರತಿಮೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಸ್ಪಿ ಋಷಿಕೇಷ್ ಭಗವಾನ್ ಸೋನಾವಣೆ, ಪ್ರಭಾರ ಎಡಿಸಿ ಮಾಣಿಕ್ಯ, ಎಸಿ ಮದನ್ ಮೋಹನ್, ಭಾರತ್ ಸೇವಾ ದಳದ ಜಿಲ್ಲಾಧ್ಯಕ್ಷ ರಹಿಂ ಬಷೀರ್, ಪ್ರಧಾನ ಕಾರ್ಯದರ್ಶಿ ಟಿ.ಕೆ. ಸುಧೀರ್, ಜಿಲ್ಲಾ ಸಂಘಟಕ ಮಂಜೆಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ಇತರೆ ಗಣ್ಯರು ಗಾಂಧಿಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಬಲ್ಮಠ ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿದ್ದರು.
ರಚನಾ ಕಾಮತ್ ಹಾಗೂ ತಂಡದವರು ಪ್ರಾರ್ಥಿಸಿದರು.