ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹ : ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ಪ್ರತಿಭಟನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು, ಶಾಸಕರ ನಿರ್ಲಕ್ಷ್ಯವಾಗಿದ್ದು, ಪ್ರತಿಯೊಂದು ಸಂಘಟನೆಯ ನಾಯಕರು ಈ ಹೋರಾಟಕ್ಕೆ ಕೈಜೋಡಿಸಬೇಕಾಗಿದೆ.” ಎಂದು ಪ್ರತಿಭಟನಾ ನಿತರರು ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ ಕ್ಯಾಂಪಸ್ ಫ್ರಂಟ್ ರಾಜ್ಯ ಕೋಶಾಧಿಕಾರಿಯಾದ ಸವಾದ್ ಕಲ್ಲರ್ಪೆ, ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಪಟ್ಟಾಭಿರಾಮ ಸೋಮಯಾಜಿ , ಎಸ್.ಡಿ.ಪಿ.ಐ ದ.ಕ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದಾತ್ , ಕ್ಯಾಂಪಸ್ ಪ್ರಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸಿರಾಜ್ ಸುರತ್ಕಲ್, ಜಿಲ್ಲಾ ಮುಖಂಡರಾದ ಶರ್ಫುಧ್ಧೀನ್ ಬಜ್ಪೆ,ಅನ್ಸಾರ್ ಪುತ್ತೂರು, ಯಾಸೀನ್ ಬೆಳ್ತಂಗಡಿ, ಫಯಾಝ್ ವಿಟ್ಲ ಉಪಸ್ಥಿತರಿದ್ದರು.